ಈದ್ಗಾ ಮೈದಾನದಲ್ಲಿ ವಿಶೇಷ ಪ್ರಾರ್ಥನೆ

ramzan
Published on

ಮಡಿಕೇರಿ: ಮುಸ್ಲಿಂ ಬಾಂಧವರ ಈದುಲ್ ಪಿತ್ರ್ ರಂಜಾನ್ ಹಬ್ಬವನ್ನು ಕೊಡಗು ಜಿಲ್ಲೆಯಾದ್ಯಂತ ಸಡಗರ, ಸಂಭ್ರಮದಿಂದ ಸೋಮವಾರ ಆಚರಿಸಲಾಯಿತು.

ಮಡಿಕೇರಿ ನಗರದ ವಿವಿಧೆಡೆ ಶ್ರದ್ಧಾಭಕ್ತಿಯಿಂದ ಹಬ್ಬವನ್ನು ಆಚರಿಸಲಾಯಿತು. ಮಸೀದಿ ಹಾಗೂ ಈದ್ಗಾ ಮೈದಾನದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ಧರ್ಮಗುರುಗಳು ಧರ್ಮಸಂದೇಶ ನೀಡಿ ಹಬ್ಬಗಳ ಆಚರಣೆಯ ಕುರಿತು ವಿವರಿಸಿದರು.

ಲೋಕಕಲ್ಯಾಣಕ್ಕಾಗಿ ಎಲ್ಲರೂ ಪ್ರಾರ್ಥಿಸುವಂತೆ ಕರೆ ನೀಡಿದರು. ಪರಸ್ಪರ ಆಲಿಂಗನದ ಮೂಲಕ ಹಬ್ಬದ ಶುಭಾಶಯಗಳನ್ನು ಹಂಚಿಕೊಂಡ ಮುಸ್ಲಿಂ ಬಾಂಧವರು, ಕುಟುಂಬ ವರ್ಗ ಹಾಗೂ ಸ್ನೇಹಿತರೊಂದಿಗೆ ವಿಶೇಷ ಖಾದ್ಯಗಳನ್ನು ಸವಿದರು. ಕಳೆದ ಒಂದು ತಿಂಗಳ ರಂಜಾನ್ ಉಪವಾಸಕ್ಕೆ ತೆರೆ ಎಳೆದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net