ಮುಂಡೂರು ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

pooja
Published on

ಪುತ್ತೂರು ಗ್ರಾಮಾಂತರ: ಪ್ರಧಾನಿ ನರೇಂದ್ರ ಮೋದಿ ಅವರ 74ನೇ ಜನ್ಮ ದಿನಾಚರಣೆ ಅಂಗವಾಗಿ ಬಿಜೆಪಿ ಮುಖಂಡ ಅರುಣ್‌ಕುಮಾರ್ ನೇತೃತ್ವದಲ್ಲಿ ಮಂಗಳವಾರ ಮುಂಡೂರಿನ ಮೃತ್ಯುಂಜಯೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.

ದೇವಸ್ಥಾನದಲ್ಲಿ ಮಹಾಪೂಜೆ ನೆರವೇರಿಸಿ, ಪ್ರಧಾನಿ ನರೇಂದ್ರ ಮೋದಿ ಅವರಿಗೆ ದೇಶವನ್ನು ಮುನ್ನಡೆಸಲು ಇನ್ನಷ್ಟು ಶಕ್ತಿ ನೀಡುವಂತೆ ಹಾಗೂ ಇಡೀ ವಿಶ್ವಕ್ಕೇ ನೇತೃತ್ವ ವಹಿಸುವ ಶಕ್ತಿ ನೀಡುವಂತೆ ದೇವರ ನಡೆಯಲ್ಲಿ ಪ್ರಾರ್ಥನೆ ಸಲ್ಲಿಸಲಾಯಿತು.

ಮುಂಡೂರು ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಅಶೋಕ್‌ಕುಮಾರ್ ಪುತ್ತಿಲ, ಕೆಮ್ಮಿಂಜೆ ಶಕ್ತಿ ಕೇಂದ್ರದ ಅಧ್ಯಕ್ಷ ಶಂಕರ ನಾರಾಯಣ ಭಟ್, ಬಿಜೆಪಿ ರೈತ ಮೋರ್ಚಾದ ತಾಲೂಕು ಅಧ್ಯಕ್ಷ ಪ್ರವೀಣ್ ಶೆಟ್ಟಿ ತಿಂಗಳಾಡಿ, ಮುಂಡೂರು ಗ್ರಾ.ಪಂ ಮಾಜಿ ಅಧ್ಯಕ್ಷೆ ಪುಷ್ಪಾವತಿ, ಸದಸ್ಯ ಬಾಲಕೃಷ್ಣ ಪೂಜಾರಿ, ಬಿಜೆಪಿ ಪ್ರಮುಖರಾದ ಪ್ರಸಾದ್ ರೈ ತಿಂಗಳಾಡಿ, ಸುಧೀರ್ ಶೆಟ್ಟಿ ನೇಸರಕಂಪ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net