ಆಂಜನೇಯ ದೇವಸ್ಥಾನದಲ್ಲಿ ವಿಶೇಷ ಪೂಜೆ

ಆಂಜನೇಯ ದೇವಸ್ಥಾನದಲ್ಲಿ ವಿಶೇಷ ಪೂಜೆ
Published on

ಪಾಂಡವಪುರ: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಮತ್ತು ಬಾಲರಾಮನ ವಿಗ್ರಹ ಪ್ರಾಣಪ್ರತಿಷ್ಠೆ ಹಿನ್ನೆಲೆಯಲ್ಲಿ ತಾಲೂಕಿನ ಜಕ್ಕನಹಳ್ಳಿಯ ಆಂಜನೇಯ ದೇವಸ್ಥಾನದಲ್ಲಿ ವಿಶೇಷ ಪೂಜೆಯೊಂದಿಗೆ ಸೋಮವಾರ ರಾಮೋತ್ಸವನ್ನು ಆಚರಿಸಲಾಯಿತು.

ಜಕ್ಕನಹಳ್ಳಿ ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಎಸ್‌ಎನ್‌ಟಿ ಸೋಮಶೇಖರ್ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಾಲರಾಮನ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ, ಪುಷ್ಪಾರ್ಚನೆ ನೆರವೇರಿಸಲಾಯಿತು. ಬಳಿಕ ನೆರೆದಿದ್ದ ಭಕ್ತರಿಗೆ ಮಜ್ಜಿಗೆ, ಪಾನಕ, ಕೋಸಂಬರಿ ವಿತರಿಸಿ ನಂತರ ಅನ್ನ ಸಂತರ್ಪಣೆ ನಡೆಸಲಾಯಿತು.

ಅಯೋಧ್ಯೆಯಲ್ಲಿ ಜರುಗಿದ ಧಾರ್ಮಿಕ ಕಾರ್ಯಕ್ರಮವನ್ನು ಬೃಹತ್ ಎಲ್‌ಇಡಿ ಪರದೆಯ ಮೂಲಕ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿತ್ತು.

ಬಿಜೆಪಿ ಮುಖಂಡರಾದ ಎಸ್‌ಎನ್‌ಟಿ ಸೋಮಶೇಖರ್, ಪುರುಷೋತ್ತಮ್, ನಾಗೇಗೌಡ, ಜೆಡಿಎಸ್ ಮುಖಂಡರಾದ ಕೆ.ಎಚ್.ಪುಟ್ಟಸ್ವಾಮಿಗೌಡ, ಜೆ.ಪಿ. ಶಿವಶಂಕರ್, ಕದಲಗೆರೆ ದಾಸೇಗೌಡ, ಜಕ್ಕನಹಳ್ಳಿ ಸಿದ್ದಪ್ಪ, ದೇವರಹಳ್ಳಿ ಸುರೇಂದ್ರ, ಜೈನ ಸಮುದಾಯದ ಮುಖಂಡರಾದ ಅಶೋಕ್, ಕೈಲಾಸ್, ದೋಲಾರಾಮ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net