ಬೆಟ್ಟಳ್ಳಿ ಮಾರಮ್ಮನ ದೇಗುಲದಲ್ಲಿ ವಿಶೇಷ ಪೂಜೆ

ಬೆಟ್ಟಳ್ಳಿ ಮಾರಮ್ಮನ ದೇಗುಲದಲ್ಲಿ ವಿಶೇಷ ಪೂಜೆ
Published on

ಹನೂರು: ಪಟ್ಟಣದ ಶ್ರೀ ಬೆಟ್ಟಳ್ಳಿ ಮಾರಮ್ಮನ ದೇಗುಲದಲ್ಲಿ ಸೋಮವಾರ ಮಕರ ಸಂಕ್ರಾಂತಿ ಹಬ್ಬದ ಹಿನ್ನಲೆ ವಿಶೇಷ ಪೂಜೆ ಹಾಗೂ ಧನುರ್ಮಾಸ ಸಮಾಪ್ತಿ ಪೂಜೆ ನೆರವೇರಿಸಲಾಯಿತು.

ಬೆಳಗ್ಗೆ 5.30ಕ್ಕೆ ದೇವಿಗೆ ಹಾಲು, ಮೊಸರು, ಪನ್ನೀರು, ಎಳನೀರು, ಕುಂಕುಮ, ಜೇನುತುಪ್ಪ ಹಾಗೂ ಗಂಧದ ಅಭಿಷೇಕ ಹಾಗೂ ಕುಂಕುಮಾರ್ಚನೆ, ಪುಷ್ಪರ್ಚಾನೆ ಸಲ್ಲಿಸಲಾಯಿತು. ನಂತರ ದೇವಿಯ ಮೂರ್ತಿಯನ್ನು ವಿವಿಧ ಪುಷ್ಪಗಳಿಂದ ಸಿಂಗರಿಸಿ ಪಂಚಾಮೃತ ಅಭಿಷೇಕ ಹಾಗೂ ನೈವೇದ್ಯ ಅರ್ಪಿಸಿ ಧೂಪದಾರತಿ, ಕೊಬ್ಬರಿ, ಬೆಲ್ಲ, ನಿಂಬೆಹಣ್ಣಿನ ಆರತಿ ಹಾಗೂ ಮಹಾ ಮಂಗಳಾರತಿ ಸಲ್ಲಿಸಿ ನಂತರ ಭಕ್ತರಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಅರ್ಚಕ ಅರುಣ್‌ರಾವ್ ಸಿಂಧೆ, ಜಯಂತ್‌ರಾವ್ ಸಿಂಧೆ ಪೂಜಾ ಕೈಂಕರ್ಯ ನೆರವೇರಿಸಿದರು.
ದೇವಿಗೆ ಕಬ್ಬಿನ ಅಲಂಕಾರ ಮಾಡಿದ್ದು ಗಮನ ಸೆಳೆಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net