

ಮದ್ದೂರು: ಗುರುಪೂರ್ಣಿಮೆ ಅಂಗವಾಗಿ ಪಟ್ಟಣದ ಪುರಾಣ ಪ್ರಸಿದ್ಧ ಹೊಳೆ ಆಂಜನೇಯಸ್ವಾಮಿ ದೇಗುದಲ್ಲಿ ವಿಶೇಷ ಪೂಜಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.
ದೇವರಿಗೆ ಮಧು ಅಭಿಷೇಕ, ಪಂಚಾಮೃತ ಅಭಿಷೇಕ, ಬೆಣ್ಣೆ ಅಲಂಕಾರ ಮಾಡಲಾಯಿತು.
ಭಕ್ತರಿಗೆ ತೀರ್ಥ ಪ್ರಸಾದ ವಿನಿಯೋಗ ಮಾಡಲಾಯಿತು. ಧಾರ್ಮಿಕ ಕಾರ್ಯಕ್ರಮದ ನೇತೃತ್ವವನ್ನು ಪ್ರಧಾನ ಅರ್ಚಕ ಪ್ರದೀಪ್ ಆಚಾರ್ಯ ವಹಿಸಿದ್ದರು.