

ಮದ್ದೂರು: ಪಟ್ಟಣದ ಕಾಶಿ ವಿಶ್ವನಾಥಸ್ವಾಮಿ ದೇವಸ್ಥಾನದಲ್ಲಿ ಆಷಾಢ ಮಾಸದ 3ನೇ ಶುಕ್ರವಾರದ ಅಂಗವಾಗಿ ವಿಶೇಷ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು.
ಆಷಾಢ ಶುಕ್ರವಾರದ ಅಂಗವಾಗಿ ದೇಗುಲದಲ್ಲಿ ವಿಶಾಲಾಕ್ಷಿ ಅಮ್ಮನವರಿಗೆ ಪಂಚಾಮೃತ ಅಭಿಷೇಕ, ರುದ್ರಾಭಿಷೇಕ, ನಂತರ ಮಹಾಮಂಗಳಾರತಿ ಮಾಡಿ ಭಕ್ತರಿಗೆ ತೀರ್ಥ ಪ್ರಸಾದ ವಿತರಣೆ ಮಾಡಲಾಯಿತು. ಧಾರ್ಮಿಕ ಕಾರ್ಯಕ್ರಮಗಳ ನೇತೃತ್ವವನ್ನು ದೇಗುಲದ ಪ್ರದಾನ ಅರ್ಚಕ ಡಾ.ರಾಘವೇಂದ್ರ ರಾವ್ ವಹಿಸಿದ್ದರು. ಪಟ್ಟಣ ಸೇರಿದಂತೆ ತಾಲೂಕಿನ ವಿವಿಧ ಭಾಗಗಳಿಂದ ಆಗಮಿಸಿದ್ದ ಭಕ್ತರು ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.