ಲಕ್ಷ್ಮೀದೇವಿ ದೇಗುಲದಲ್ಲಿ ವಿಶೇಷ ಪೂಜೆ

Published on

ಮದ್ದೂರು: ತಾಲೂಕಿನ ಬೆಸಗರಹಳ್ಳಿ ಗ್ರಾಮದ ಶ್ರೀ ಲಕ್ಷ್ಮಿದೇವಿ ದೇವಸ್ಥಾನದಲ್ಲಿ ವಿಜಯದಶಮಿ ಅಂಗವಾಗಿ ಮಂಗಳವಾರ ವಿಶೇಷ ಧಾರ್ಮಿಕ ಕಾರ್ಯಕ್ರಮ ನೆರವೇರಿತು.

ದೇವಿಗೆ ವಿಶೇಷ ಅಲಂಕಾರ, ಅಭಿಷೇಕ, ಮಹಾ ಮಂಗಳಾರತಿ ಸೇರಿದಂತೆ ವಿವಿಧ ಪೂಜಾ ಕೈಂಕರ್ಯಗಳು ನೆರವೇರಿಸಲಾಯಿತು. ನಂತರ ಭಕ್ತಾದಿಗಳಿಗೆ ತೀರ್ಥ ಪ್ರಸಾದ ವಿತರಣೆ ಮಾಡಲಾಯಿತು.

ಪ್ರಧಾನ ಅರ್ಚಕ ನಾರಾಯಣ್ ಪೂಜಾ ಕಾರ್ಯಕ್ರಮ ನೇತೃತ್ವ ವಹಿಸಿದ್ದರು. ಗ್ರಾಮಸ್ಥರು ಹಾಗೂ ಭಕ್ತಾದಿಗಳು ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net