ಮಹದೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

02BTP01
ಮಹದೇಶ್ವರ ಮಠ ಗ್ರಾಮದಲ್ಲಿರುವ ಶ್ರೀ ಮಹದೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಅಮಾವಾಸ್ಯೆ ಮತ್ತು ಕಾರ್ತಿಕ ಮಾಸದ ಅಂಗವಾಗಿ ವಿಶೇಷ ಪೂಜೆ ನಡೆಯಿತು.
Published on

ಬೆಟ್ಟದಪುರ: ಬೆಟ್ಟದಪುರ ಸಮೀಪದ ಮಹದೇಶ್ವರ ಮಠ ಗ್ರಾಮದ ಶ್ರೀ ಮಹದೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಭಾನುವಾರ ಅಮಾವಾಸ್ಯೆ ಹಾಗೂ ಕಾರ್ತಿಕ ಮಾಸದ ಅಂಗವಾಗಿ ವಿಶೇಷ ಪೂಜೆ ಜರುಗಿತು.

ಬೆಳಗ್ಗೆ ರುದ್ರಾಭಿಷೇಕ, ಅಲಂಕಾರ ಪೂಜೆ ಹಾಗೂ ಹೂಮ-ಹವನ ಅರ್ಚಕ ಜಗದೀಶ್ ಹಾಗೂ ತಂಡದ ನೇತೃತ್ವದಲ್ಲಿ ನಡೆದವು. ಭಕ್ತಾದಿಗಳಿಗೆ ದೇವಸ್ಥಾನದ ಸಮಿತಿಯಿಂದ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು.

ಸೋಮವಾರ ಬೆಳಗ್ಗೆ ದೇವಸ್ಥಾನದ ಆವರಣದಲ್ಲಿ ಭಕ್ತಾಸಿಗಳ ಸಮ್ಮುಖದಲ್ಲಿ ಕೊಂಡೋತ್ಸವ ನಡೆಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net