

ಹೊಳೆನರಸೀಪುರ: ಪಟ್ಟಣದ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಾಲಯದಲ್ಲಿ ಮಂಗಳವಾರ ಶ್ರೀ ನರಸಿಂಹಸ್ವಾಮಿ ಜಯಂತಿ ಪ್ರಯುಕ್ತ ವಿಶೇಷ ಪೂಜಾ ಮಹೋತ್ಸವ ಜರುಗಿತು.
ಶ್ರೀ ನರಸಿಂಹಸ್ವಾಮಿ ಜಯಂತಿ ಪ್ರಯುಕ್ತ ಬ್ರಾಹ್ಮಿ ಮಹೂರ್ತದಲ್ಲಿ ಶ್ರೀ ಲಕ್ಷ್ಮೀ ನರಸಿಂಹಸ್ವಾಮಿಯ ಮೂಲ ಮೂರ್ತಿಗೆ ಪಂಚಾಮೃತ ಅಭಿಷೇಕ, ವಿಶೇಷ ಅಲಂಕಾರ, ನೈವೇಧ್ಯ, ತಧಿ ಆರಾಧನೆ ಸೇವೆ, ಸಹಸ್ರ ನಾಮಾರ್ಚನೆ, ಮಂಗಳಾರತಿ ನೆರವೇರಿಸಲಾಯಿತು.
ಶ್ರೀ ಸ್ವಾಮಿಯ ಉತ್ಸವ ಮೂರ್ತಿಯನ್ನು ಅಲಂಕರಿಸಿ, ಪೂಜಾ ಕೈಂಕರ್ಯ ನೆರವೇರಿಸಿ, ಉತ್ಸವದ ರಥದಲ್ಲಿ ಪ್ರತಿಷ್ಠಾಪಿಸಿ, ಪೂಜಿಸಿದ ನಂತರ ರಥಬೀದಿ ಉತ್ಸವ ಹಾಗೂ ಪ್ರಾಕಾರೋತ್ಸವ, ಮಹಾಮಂಗಳಾರತಿ, ತೀರ್ಥ ಪ್ರಸಾದ ವಿನಿಯೋಗ ಮಾಡಲಾಯಿತು. ದೇವಾಲಯದ ಪ್ರಹಾಂಗಣ, ಶ್ರೀ ರಘುಪತಿ ದೇವಾಲಯ ಹಾಗೂ ರಥ ಬೀದಿಯಲ್ಲಿ ಶ್ರೀ ಸ್ವಾಮಿಯ ಭಕ್ತರು ಪಾನಕ ಹಾಗೂ ಕೋಸಂಬರಿ ವಿತರಿಸಿದರು.