

ಹೊನ್ನಾವರ: ತಾಲೂಕಿನ ಮುಗ್ವಾ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಾಗರ ಪಂಚಮಿ ಅಂಗವಾಗಿ ಮಂಗಳವಾರ ವಿಶೇಷ ಪೂಜೆ ನೆರವೇರಿತು. ಸಾವಿರಾರು ಜನರು ದೇವಸ್ಥಾನಕ್ಕೆ ಆಗಮಿಸಿ ವಿವಿಧ ಸೇವೆ ಸಲ್ಲಿಸಿದರು.
ಶ್ರೀ ಸುಬ್ರಹ್ಮಣ್ಯ ದೇವರಿಗೆ ಕ್ಷೀರಾಭಿಷೇಕ, ಪಂಚಾಮೃತಾಭಿಷೇಕ, ಆರತಿ, ಕುಂಕುಮಾರ್ಚನೆ, ಬಾಳೆಹಣ್ಣು, ತೆಂಗಿನಕಾಯಿ ಸೇವೆಯನ್ನು ಭಕ್ತರು ಸಲ್ಲಿಸಿ ಇಷ್ಟಾರ್ಥ ಸಿದ್ಧಿಸಲು ಪ್ರಾರ್ಥಿಸಿದರು. ನಾಗಬನದಲ್ಲಿರುವ ನಾಗದೇವರಿಗೆ ಅಭಿಷೇಕ ಸೇವೆ ಸಲ್ಲಿಸಿದರು.