

ಮಡಿವಾಳ: ತೊರ್ನಹಳ್ಳಿ ಗ್ರಾಪಂನ ಹೆಡಗಿನಬೆಲೆ ಗ್ರಾಮದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಹಿನ್ನೆಲೆ ವೇಣುಗೋಪಾಲಸ್ವಾಮಿ ದೇವಾಲಯದಲ್ಲಿ ಅರ್ಚಕ ಮಂಜುನಾಥಶಾಸ್ತ್ರಿಗಳ ನೇತೃತ್ವದಲ್ಲಿ ವಿಶೇಷ ಪೂಜಾ ಕಾರ್ಯಕ್ರಮಗಳನ್ನು ನೆರವೇರಿಸಲಾಯಿತು. ಸ್ವಾಮಿಗೆ ಬೆಣ್ಣೆ ಅಲಂಕಾರ ಮಾಡಲಾಗಿತ್ತು.
ವೇಣುಗೋಪಾಲಸ್ವಾಮಿ ದೇವಾಲಯದಲ್ಲಿ ಸ್ವಾಮಿಗೆ ಮುಂಜಾನೆಯಿಂದಲೇ ಅಭಿಷೇಕ, ಹೋಮ, ಹವನ, ವೇದ ಮಂತ್ರ ಪಾರಾಯಣ, ವಿಶೇಷ ಹೂವಿನ ಹಾಗೂ ಆಭರಣ ಅಲಂಕಾರ ಮಾಡಲಾಗಿತ್ತು. ಸುತ್ತಮುತ್ತಲ ಗ್ರಾಮಸ್ಥರು ದೇವಾಲಯಕ್ಕೆ ಆಗಮಿಸಿ ಪೂಜೆಸಲ್ಲಿಸಿ ಪ್ರಸಾದ ಸ್ವೀಕರಿಸಿದರು.
ಸಂಜೆ ಉತ್ಸವ ಮೂರ್ತಿಯನ್ನು ಪಲ್ಲಕ್ಕಿಯಲ್ಲಿ ಕೂರಿಸಿಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಯಿತು. ಎಚ್.ಎನ್.ಕೃಷ್ಣಪ್ಪ, ಎಚ್.ಸಿ.ನಾಗೇಶ್, ಎಚ್.ಸಿ.ಚನ್ನಕೃಷ್ಣ, ಎಚ್.ಕೆ.ರಾಜಣ್ಣ ಇದ್ದರು.