‘ಆಪರೇಷನ್ ಸಿಂಧೂರ’ ಯಶಸ್ಸಿಗೆ ವಿಶೇಷ ಪೂಜೆ

9 srs 3
Published on

ಶಿರಸಿ: ಪಹಲ್ಗಾಮನಲ್ಲಿ ನಡೆದ ಭಯೋತ್ಪಾದಕರ ದಾಳಿಗೆ ಪ್ರತ್ಯುತ್ತರವಾಗಿ ಭಾರತೀಯ ಸೇನೆ ಭಯೋತ್ಪಾದಕರ ಶಿಬಿರಗಳ ಮೇಲೆ ನಡೆಸುತ್ತಿರುವ ಆಪರೇಷನ್ ಸಿಂಧೂರ ಕಾರ್ಯಾಚರಣೆ ಯಶಸ್ವಿಯಾಗಲಿ ಎಂದು ಕೋರಿ ನಗರದ ಮಾರಿಕಾಂಬಾ ದೇವಾಲಯದಲ್ಲಿ ಶುಕ್ರವಾರ ವಿಶೇಷ ಪೂಜೆ ಸಲ್ಲಿಸಲಾಯಿತು.

ಭಾರತವು ಭಯೋತ್ಪಾದಕರ ಮೇಲೆ ನಡೆಸುತ್ತಿರುವ ಕಾರ್ಯಾಚರಣೆ ಸಫಲವಾಗಿ ನೆರವೇರಿ ಯೋಧರಿಗೆ ಒಳಿತಾಗಲಿ, ಮತ್ತಷ್ಟು ಶಕ್ತಿಯನ್ನು ಶ್ರೀ ಮಾರಿಕಾಂಬಾ ದೇವಿಯು ಅನುಗ್ರಹಿಸಲಿ ಎಂದು ಸಂಕಲ್ಪಿಸಿ ಪ್ರಾರ್ಥನೆ ಸಲ್ಲಿಸಲಾಯಿತು.

ದೇವಾಲಯದ ಧರ್ಮದರ್ಶಿ ಮಂಡಳಿಯ ಅಧ್ಯಕ್ಷ ಆರ್.ಜಿ. ನಾಯ್ಕ, ಧರ್ಮದರ್ಶಿಗಳು, ದೇವಾಲಯದ ಸಿಬ್ಬಂದಿ, ಅರ್ಚಕರು, ಭಕ್ತರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net