ಭಾರತ ತಂಡದ ಗೆಲುವಿಗಾಗಿ ವಿಶೇಷ ಪೂಜೆ

IMG-20250309-WA0004.jpg
Published on

ಬೆಳಗಾವಿ: ದುಬೈನಲ್ಲಿ ಇಂದು ನಡೆಯಲಿರುವ ಚಾಂಪಿಯನ್ಸ್‌ ಟ್ರೋಫಿಯ ಫೈನಲ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ ಭಾರತ ತಂಡ ಜಯಿಸಲಿ ಎಂದು ಪ್ರಾರ್ಥಿಸಿ, ಇಲ್ಲಿನ ರಾಣಿ ಚನ್ನಮ್ಮನ ವೃತ್ತದ ಬಳಿಯ ಗಣೇಶ ಮಂದಿರದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ(ಟಿ.ಎ.ನಾರಾಯಣಗೌಡ ಬಣ) ಕಾರ್ಯಕರ್ತರು ಭಾನುವಾರ ಪೂಜೆ ಸಲ್ಲಿಸಿದರು.

ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ದೀಪಕ ಗುಡಗನಟ್ಟಿ ಮಾತನಾಡಿ ಈ ಪಂದ್ಯದಲ್ಲಿ ಭಾರತ ಗೆಲ್ಲಲೆಂದು ಪೂಜೆ ಸಲ್ಲಿಸಿದ್ದೇವೆ. ನಮ್ಮ ತಂಡ ಗೆದ್ದೇ ಗೆಲ್ಲುತ್ತದೆ ಎಂಬ ವಿಶ್ವಾಸವಿದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net