

ರಾಯಚೂರು ತಾಲೂಕಿನ ಸುಕ್ಷೇತ್ರ ಕುರುವಪುರ ಶ್ರೀ ದತ್ತಾತ್ರೇಯ ದೇವಸ್ಥಾನದಲ್ಲಿ ಏ.೧೨ ರಂದು ದವನದ ಹುಣ್ಣಿಮೆ ನಿಮಿತ್ತ ವಿಶೇಷ ಪೂಜೆ, ಅನ್ನಸಂತರ್ಪಣೆ ಕಾರ್ಯಕ್ರಮ ಆಯೋಜಿಸಲಾಗಿದೆಂದು ದೇವಸ್ಥಾನ ಭಕ್ತ ಹನುಮೇಶ ಹೇಳಿದರು.
ನಗರದ ಪತ್ರಿಕಾ ಭವನದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಶ್ರೀ ದತ್ತಾತ್ರೇಯ ಇವರ ಅವತಾರ ಶ್ರೀಪಾದ ವಲ್ಲಭ ತಪೋಭೂಮಿಯಾಗಿರುವ ಕುರುವಾಪುರಕ್ಕೆ ರಾಜ್ಯ ಸೇರಿದಂತೆ ವಿವಿಧ ರಾಜ್ಯಗಳಿಂದ ಸಹಸ್ರಾರು ಭಕ್ತರು ಆಗಮಿಸುತ್ತಿದ್ದಾರೆ. ಮೂಲಭೂತ ಸೌಕರ್ಯಗಳಿದೇ ಭಕ್ತರು ತೊಂದರೆ ಅನುಭವಿಸುತ್ತಿದ್ದಾರೆ.
ಕೃಷ್ಣ ನದಿಗೆ ಸೇತುವೆ ನಿರ್ಮಾಣ ಕಾಮಗಾರಿ ಇನ್ನೂ ಅಪೂರ್ಣವಾಗಿಯೇ ಉಳಿದಿದೆ. ಬೇಸಿಗೆಯಿಂದ ಕೃಷ್ಣ ನದಿ ದಾಟಿ ಹೋಗಲು ತಾತ್ಕಾಲಿಕ ರಸ್ತೆ ವ್ಯವಸ್ಥೆ ಮಾಡಲಾಗಿದೆ. ಭಕ್ತರು ವಿಶೇಷ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಕೃತಾರ್ಥರಾಗಬೇಕು. ನಾಗರ್ಜುನರೆಡ್ಡಿ ನೇತೃತ್ವದಲ್ಲಿ ಪುರ್ಜಾ ಕಾರ್ಯಕ್ರಮಗಳು ಆಯೋಜಿಸಲಾಗಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸಿ ದರ್ಶನ ಪಡೆಯಬೇಕೆಂದು ಮನವಿ ಮಾಡಿದರು. ಈ ಸಂದರ್ಭದಲ್ಲಿ ಅಮನ್ ಇದ್ದರು.