ಬಿಜೆಪಿ ಕಾರ್ಯಕರ್ತರಿಂದ ಸಾಲುಮರದಮ್ಮಗೆ ವಿಶೇಷ ಪೂಜೆ

9 tke 03
Published on

ತರೀಕೆರೆ: ನರೇಂದ್ರ ಮೋದಿ 3ನೇ ಬಾರಿ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ಭಾನುವಾರ ಪಟ್ಟಣದ ಶ್ರೀ ಸಾಲುಮರದಮ್ಮ ದೇಗುಲದಲ್ಲಿ ಬಿಜೆಪಿ ಪ್ರಮುಖರು ಹಾಗೂ ಕಾರ್ಯಕರ್ತರು ವಿಶೇಷ ಪೂಜೆ ಸಲ್ಲಿಸಿದರು.

ದೇವರಿಗೆ ಕುಂಕುಮಾರ್ಚನೆ ನೆರವೇರಿಸಿ ದೇಗುಲದ ಆವರಣದಲ್ಲಿ ಇರಿಸಿದ್ದ ಭಾರತಾಂಬೆಯ ಭಾವಚಿತ್ರಕ್ಕೆ ಕ್ಷೀರಾಭಿಷೇಕ ಮಾಡಿದರು. ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕ ಡಿ.ಎಸ್.ಸುರೇಶ್, ಜಿಲ್ಲಾ ಸಿಡಿಸಿಸಿ ಬ್ಯಾಂಕ್ ಮಾಜಿ ಉಪಾಧ್ಯಕ್ಷ ಟಿ.ಎಲ್.ರಮೇಶ್, ನಿರ್ದೇಶಕ ಕೆ.ಆರ್.ಆನಂದಪ್ಪ, ಜಿಪಂ ಮಾಜಿ ಅಧ್ಯಕ್ಷ ಕೆ.ಆರ್.ಧ್ರುವಕುಮಾರ್, ಪ್ರಮುಖರಾದ ಶಂಭೈನೂರು ಆನಂದಪ್ಪ, ಬಿ.ಸೋಮಶೇಖರ್, ಎಚ್.ಬಿ.ರೇಣುಕಪ್ಪ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net