ಶ್ರೀ ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ

11KMD-2
ಮೂರನೇ ಆಷಾಡ ಶುಕ್ರವಾರದ ಹಿನ್ನಲೆಯಲ್ಲಿ ಕೆ.ಎಂ.ದೊಡ್ಡಿಯ ಚಾಂಶುಗರ್ಸ್‌ ಕಾರ್ಖಾನೆ ಆವರಣದಲ್ಲಿರುವ ಶ್ರೀ ಚಾಮುಂಡೇಶ್ವರಿ ತಾಯಿಗೆ ಶಾಸಕ ಕದಲೂರು ಉದಯ್ ದಂಪತಿ ವಿಶೇಷ ಪೂಜೆ ಸಲ್ಲಿಸಿ ದೇವರ ಆಶೀರ್ವಾರ ಪಡೆದರು.
Published on

ಕೆ.ಎಂ.ದೊಡ್ಡಿ : ಮೂರನೇ ಆಷಾಢ ಶುಕ್ರವಾರದ ಹಿನ್ನೆಲೆಯಲ್ಲಿ ಇಲ್ಲಿನ ಚಾಂಶುಗರ್ಸ್‌ ಕಾರ್ಖಾನೆ ಆವರಣದಲ್ಲಿರುವ ಶ್ರೀ ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜಾ ಕಾರ್ಯಕ್ರಮ ಜರುಗಿದವು.

ಮುಂಜಾನೆ ದೇವಿಗೆ ವಿಶೇಷ ದ್ರವ್ಯ ಅಭಿಷೇಕ, ವಿವಿಧ ಹೂವುಗಳಿಂದ ಅಲಂಕಾರ ಮಾಡಲಾಗಿತ್ತು. ಬಳಿಕ ದೇವಾಲಯದ ಪ್ರಧಾನ ಅರ್ಚಕ ಕಾರ್ತಿಕ್ ಆರಾಧ್ಯ ಅವರಿಂದ ವಿಶೇಷ ಪೂಜಾ ಕೈಂಕರ್ಯಗಳು ನೆರವೇರಿದವು. ಬಳಿಕ ಮಹಾಮಂಗಳಾರತಿ ಜರುಗಿತು. ದೇವಾಲಯಕ್ಕೆ ಆಗಮಿಸಿದ ಭಕ್ತರಿಗೆ ಪ್ರಸಾದ ವಿನಿಯೋಗ ನೆರವೇರಿತು.

ಈ ವೇಳೆ ಮಹಿಳೆಯರು ತಾಯಿ ಚಾಮುಂಡೇಶ್ವರಿಗೆ ನಿಂಬೆಹಣ್ಣಿನ ಆರತಿ ಬೆಳಗಿದರು. ಮೂರನೇ ಆಷಾಢ ಶುಕ್ರವಾರದ ಅಂಗವಾಗಿ ದೇವಾಲಯದಲ್ಲಿ ಜಿ.ಪಂ.ಮಾಜಿ ಸದಸ್ಯ ಎ.ಎಸ್.ರಾಜೀವ್ ಪೂಜಾ ಕಾರ್ಯಕ್ರಮದ ನೇತೃತ್ವ ವಹಿಸಿದ್ದರು.

ಮದ್ದೂರು ಕ್ಷೇತ್ರದ ಶಾಸಕ ಕದಲೂರು ಉದಯ್ ಮತ್ತು ವಿನುತಾ ದಂಪತಿ ದೇವಾಲಯಕ್ಕೆ ಆಗಮಿಸಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ದೇವಾಲಯಕ್ಕೆ ಅಸಂಖ್ಯಾತ ಭಕ್ತರು ಆಗಮಿಸಿ ದೇವಿಯ ದರ್ಶನ ಪಡೆದರು.

ಡಿಸಿಸಿ ಬ್ಯಾಂಕ್ ಅಧ್ಯಕ್ಷ ಜೋಗೀಗೌಡ, ಪುರಸಭೆ ಅಧ್ಯಕ್ಷೆ ಕೋಕಿಲಾ ಅರುಣ್, ಚಾಂಶುಗರ್ಸ್‌ ಕಾರ್ಖಾನೆಯ ಉಪಾಧ್ಯಕ್ಷ ಮಣಿ, ವ್ಯವಸ್ಥಾಪಕ ಎಂ.ರವಿ, ಕಾರ್ಖಾನೆ ಅಧಿಕಾರಿಗಳಾದ ನಿತೀಶ್, ನಿಂಗಯ್ಯ, ಮನ್ಮುಲ್ ನಿರ್ದೇಶಕ ಹರೀಶ್‌ಬಾಬು, ಡಿಸಿಸಿ ಬ್ಯಾಂಕ್ ನಿರ್ದೇಶಕ ಸಂದರ್ಶ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net