ಸುಂಟಿಕೊಪ್ಪ: ಸುಂಟಿಕೊಪ್ಪ ಶ್ರೀ ಚಾಮುಂಡೇಶ್ವರಿ, ಶ್ರೀ ಮುತ್ತಪ್ಪ ಮತ್ತು ಪರಿವಾರ ದೇವರುಗಳ 56ನೇ ವರ್ಷದ ತೆರೆ ಮಹೋತ್ಸವಕ್ಕೆ ಮಾರ್ಚ್ 30, 31 ಹಾಗೂ ಏ.1ರಂದು ಮೂರು ದಿನಗಳು ವಿಶೇಷ ಪೂಜೆಗಳು ನಡೆಯಲಿವೆ ಎಂದು ದೇವಸ್ಥಾನ ಸಮಿತಿಯ ಅಧ್ಯಕ್ಷ ಉದಯಕುಮಾರ್ ತಿಳಿಸಿದ್ದಾರೆ.
ಶನಿವಾರ ಬೆಳಗ್ಗೆ 6.45 ಗಂಟೆಗೆ ಗಣಪತಿ ಹವನ, 7.15 ಗಂಟೆಗೆ ಶುದ್ಧಿ ಪುಣ್ಯಾಹ, 7.30 ಗಂಟೆಗೆ ಬಾವುಟವನ್ನು ಏರಿಸುವುದು, ಸಂಜೆ 4 ಗಂಟೆಗೆ ಶ್ರೀ ಮುತ್ತಪ್ಪ ದೇವರ ಮಲೆ ಇಳಿಸುವಿಕೆ, ಸಂಜೆ 6 ಗಂಟೆಗೆ ಚಂಡೆಮೇಳ, 7 ಗಂಟೆಗೆ ಶ್ರೀ ಮುತ್ತಪ್ಪ ವೆಳ್ಳಾಟಂ ನಡೆಯಲಿದೆ.
31ರಂದು ಬೆಳಗ್ಗೆ 7 ಗಂಟೆಗೆ ವಾದ್ಯಮೇಳ, 9 ಗಂಟೆಗೆ ವಿಷ್ಣುಮೂರ್ತಿ ವೆಳ್ಳಾಟಂ, 11 ಗಂಟೆಗೆ ಶ್ರೀ ಶಾಸ್ತಪ್ಪನ ವೆಳ್ಳಾಟಂ, 11 ಗಂಟೆಗೆ ಕಳಿಗ ಪಾಟ್, ಅಂದಿವೇಳೆಕಳಸಂ ಸ್ವೀಕರಿಸುವುದು ವೆಳ್ಳೆಕಟ್, ಮಧ್ಯಾಹ್ನ 1 ಗಂಟೆಗೆ ಶ್ರೀ ಗುಳಿಗನ ವೆಳ್ಳಾಟಂ, ಶ್ರೀ ಗುಳಿಗನ ಕೋಲ, ಮಧ್ಯಾಹ್ನ 2 ಗಂಟೆಗೆ ಶ್ರೀ ಶಾಸ್ತಪ್ಪನ ಕೋಲ, ಸಂಜೆ 4 ಗಂಟೆಗೆ ಅಡಿಯರ ಮೆರವಣಿಗೆ, 7 ಗಂಟೆಗೆ ಶ್ರೀ ಮುತ್ತಪ್ಪ ವೆಳ್ಳಾಟಂ, 8 ಗಂಟೆಗೆ ಶ್ರೀ ಚಾಮುಂಡೇಶ್ವರಿ ಮತ್ತು ಶ್ರೀ ರಕ್ತ ಚಾಮುಂಡಿ ವೆಳ್ಳಾಟಂ, ರಾತ್ರಿ 8.30 ಗಂಟೆಗೆ ಶ್ರೀ ವಸೂರಿಮಾಲೆ ಸ್ನಾನಕ್ಕೆ ಹೊರಡುವುದು, ಬೆಳಗಿನ ಜಾವ 4 ಗಂಟೆಗೆ ಶ್ರೀ ಮುತ್ತಪ್ಪ ತಿರುವಪ್ಪನ ಕೋಲ ನಡೆಯಲಿದೆ.
ಏ. 1 ರಂದು ಬೆಳಗ್ಗೆ 7 ಗಂಟೆಗೆ ಶ್ರೀ ರಕ್ತ ಚಾಮುಂಡಿ ಕೋಲ, 8 ಗಂಟೆಗೆ ಶ್ರೀ ಮುತ್ತಪ್ಪ ಮತ್ತು ಶ್ರೀ ತಿರುವಪ್ಪ ದೇವರ ಪಳ್ಳಿವೇಟ, 9 ಗಂಟೆಗೆ ಶ್ರೀ ವಿಷ್ಣುಮೂರ್ತಿ ಕೋಲ, 10 ಗಂಟೆಗೆ ಶ್ರೀ ಚಾಮುಂಡೇಶ್ವರಿ ಕೋಲ, 11 ಗಂಟೆಗೆ ಶ್ರೀ ವಸೂರಿ ಮಾಲೆ ಕೋಲ, ಮಧ್ಯಾಹ್ನ 12 ಗಂಟೆಗೆ ಗುರುಶ್ರೀ ದರ್ಪಣ, ಮಧ್ಯಾಹ್ನ 2 ಗಂಟೆಗೆ ಬಾವುಟ ಇಳಿಸಲಾಗುವುದೆಂದು ಶ್ರೀ ಚಾಮುಂಡೇಶ್ವರಿ ಹಾಗೂ ಮುತ್ತಪ್ಪ ದೇವಾಲಯ ಸಮಿತಿ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.