ಡಿ.ಕೆ.ಶಿವಕುಮಾರ್ ಜನ್ಮದಿನ ದೇವಸ್ಥಾನಗಳಲ್ಲಿ ವಿಶೇಷ ಪೂಜೆ

dk shivakumar birthaday
ಶಿವಮೊಗ್ಗ ಜಿಲ್ಲಾ ಎನ್‌ಎಸ್‌ಯುಐ ಪದಾಧಿಕಾರಿಗಳು ರವೀಂದ್ರನಗರದ ಗಣಪತಿ ದೇವಸ್ಥಾನದಲ್ಲಿ ಡಿ.ಕೆ.ಶಿವಕುಮಾರ್ ಅವರ ಭಾವಚಿತ್ರಗಳನ್ನಿಟ್ಟು ವಿಶೇಷ ಪೂಜೆ ನಡೆಸಿದರು. ವಿಜಯ್ ಕುಮಾರ್ ಚೇತನ್, ಮಧುಸೂದನ್, ರವಿ ಕಾಟಿಕೆರೆ, ಚಂದ್ರೋಜಿ ರಾವ್, ಅಭಿ, ತೌಫಿಕ್, ವರುಣ, ಆದಿತ್ಯ, ಜೀವನ್, ನಂದೀಶ್, ಶ್ರೀಕಾಂತ, ಮನು ಇದ್ದರು.
Published on

ಶಿವಮೊಗ್ಗ: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಜನ್ಮದಿನವನ್ನು ಗುರುವಾರ ಶಿವಮೊಗ್ಗದಲ್ಲಿ ಅವರ ಅಭಿಮಾನಿಗಳು ಮತ್ತು ಪಕ್ಷದ ಕಾರ್ಯಕರ್ತರು ವಿಶೇಷವಾಗಿ ಆಚರಿಸಿದರು.

ದೇವಸ್ಥಾನಗಳಲ್ಲಿ ವಿಶೇಷ ಪೂಜೆ, ಆಸ್ಪತ್ರೆಗಳಲ್ಲಿ ರೋಗಿಗಳು, ಬಾಣಂತಿಯರಿಗೆ ಹಣ್ಣು, ಬ್ರೆಡ್ ವಿತರಿಸಲಾಯಿತು. ಜಿಲ್ಲಾ ಎನ್‌ಎಸ್‌ಯುಐ ಪದಾಧಿಕಾರಿಗಳು ರವೀಂದ್ರನಗರದ ಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಜಿಲ್ಲಾಧ್ಯಕ್ಷ ವಿಜಯ್‌ಕುಮಾರ್ ಮುಖಂಡರಾದ ಚೇತನ್, ಮಧುಸೂದನ್, ರವಿ ಕಾಟಿಕೆರೆ, ಚಂದ್ರೋಜಿ ರಾವ್ ಮತ್ತಿತರರು ಪಾಲ್ಗೊಂಡಿದ್ದರು.

ಕೆಪಿಸಿಸಿ ಮುಖಂಡರು ಮತ್ತು ಕಾರ್ಯಕರ್ತರು ಬೆಳಗ್ಗೆ ತಿಲಕ್‌ನಗರ ರಾಘವೇಂದ್ರ ಸ್ವಾಮಿ ಮಠ ಮತ್ತು ಕಾಮಾಕ್ಷಿ ಬೀದಿಯ ಗಣಪತಿ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ವಿಭಾಗ ಹಾಗೂ ಐಎನ್‌ಟಿಯುಸಿ ಪದಾಧಿಕಾರಿಗಳು ಮೆಗ್ಗಾನ್ ಆಸ್ಪತ್ರೆಯ ಹೆರಿಗೆ ವಾರ್ಡ್‌ನಲ್ಲಿ ಬಾಣಂತಿಯರಿಗೆ ಬ್ರೆಡ್ ಮತ್ತು ಹಣ್ಣು ವಿತರಿಸಿದರು. ಪ್ರಮುಖರಾದ ಕವಿತಾ ರಾಘವೇಂದ್ರ, ಎಂ.ಕುಮಾರ್, ಕವಿತಾ ತೋಟನವರ್ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net