ವಿಶೇಷ ರೈಲು ಸಂಚಾರ

RAIL NEW
Published on

ಹುಬ್ಬಳ್ಳಿ : ಗಣೇಶ ಚತುರ್ಥಿ ಅಂಗವಾಗಿ ನೈಋತ್ಯ ರೈಲ್ವೆ ವಲಯವು ಯಶವಂತಪುರ- ಬೆಳಗಾವಿ- ಯಶವಂತಪುರ ಮಧ್ಯೆ ವಿಶೇಷ ಎಕ್ಸ್​ಪ್ರೆಸ್ ರೈಲು ಸಂಚಾರ ಪ್ರಾರಂಭಿಸಿದೆ.

ಸೆ. 15ರಂದು ಸಂಜೆ 6.15ಕ್ಕೆ ಯಶವಂತಪುರದಿಂದ ಹೊರಡುವ ರೈಲು, ಮಾರನೇ ದಿನ ಬೆಳಗ್ಗೆ 6 ಗಂಟೆಗೆ ಬೆಳಗಾವಿ ತಲುಪಲಿದೆ. 16ರಂದು ಸಂಜೆ 5.30ಕ್ಕೆ ಬೆಳಗಾವಿಯಿಂದ ಹೊರಡುವ ರೈಲು, ಮಾರನೇ ದಿನ ಬೆಳಗಿನಜಾವ 4.30ಕ್ಕೆ ಯಶವಂತಪುರ ತಲುಪಲಿದೆ.

ಮತ್ತೊಂದು ರೈಲು ಸೆ. 17ರಂದು ಸಂಜೆ 6.15ಕ್ಕೆ ಯಶವಂತಪುರದಿಂದ ಹೊರಟು, ಮಾರನೇ ದಿನ ಬೆಳಗ್ಗೆ 6 ಗಂಟೆಗೆ ಬೆಳಗಾವಿ ತಲುಪಲಿದೆ. 18ರಂದು ಸಂಜೆ 6.30ಕ್ಕೆ ಬೆಳಗಾವಿಯಿಂದ ಹೊರಡುವ ರೈಲು, ಮಾರನೇ ದಿನ ಬೆಳಗಿನಜಾವ 5.25ಕ್ಕೆ ಯಶವಂತಪುರ ನಿಲ್ದಾಣ ತಲುಪಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net