

ಮದ್ದೂರು: ಚಂಪ ಷಷ್ಠಿ ಜಾತ್ರಾ ಮಹೋತ್ಸವ ಪ್ರಯುಕ್ತ ತಾಲೂಕಿನ ರಾಂಪುರ ಗ್ರಾಮದ ಪುರಾಣ ಪ್ರಸಿದ್ಧ ಶ್ರೀ ಆದಿಷ್ಟ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದಲ್ಲಿ ಡಿ.7ರಂದು ವಿಶೇಷ ಧಾರ್ಮಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ದೇಗುಲದ ಪ್ರಧಾನ ಅರ್ಚಕ ವಿಶ್ವನಾಥ ಶಾಸ್ತ್ರಿ ತಿಳಿಸಿದ್ದಾರೆ.
ಅಂದು ಬೆಳಗ್ಗೆ 7 ಗಂಟೆಗೆ ಮಹಾ ಗಣಪತಿ ಪೂಜೆ, ಪುಣ್ಯಾಹ, ಪ್ರಧಾನ ಸುಬ್ರಹ್ಮಣ್ಯ ಸ್ವಾಮಿ ಹೋಮ, ದೇವರಿಗೆ ವಿಶೇಷ ಅಭಿಷೇಕ, ಮಹಾ ಮಂಗಳಾರತಿ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದೇಗುಲಕ್ಕೆ ಆಗಮಿಸುವ ಭಕ್ತರಿಗೆ ಅನ್ನ ಸಂತರ್ಪಣೆ ಹಮ್ಮಿಕೊಳ್ಳಲಾಗಿದೆ. ಜಾತ್ರಾ ಮಹೋತ್ಸವಕ್ಕೆ ಈಗಾಗಲೇ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಭಕ್ತರು ಆಗಮಿಸಿ ಆಗಮಿಸಿ ದೇವರ ಕೃಪೆಗೆ ಒಳಗಾಗಬೇಕೆಂದು ಮನವಿ ಮಾಡಿದ್ದಾರೆ.