ಮದ್ದೂರು: ತಾಲೂಕಿನ ಕೌಡ್ಲೆ ಗ್ರಾಮದ ಪುರಾಣ ಪ್ರಸಿದ್ಧ ಶ್ರೀ ಕೌಡ್ಲೆ ಪಟ್ಟಲದಮ್ಮ ದೇಗುಲದಲ್ಲಿ ಮಹಾಶಿವರಾತ್ರಿ ಅಂಗವಾಗಿ ಫೆ.26 ರಂದು ವಿಶೇಷ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಹಾಗೂ ಫೆ.27ರಂದು ಮಧ್ಯಾಹ್ನ 3 ಗಂಟೆಗೆ ಸಹಸ್ರಾರು ಭಕ್ತಾದಿಗಳಿಗೆ ದೇಗುಲದ ಆವರಣದಲ್ಲಿ ಕೌಡ್ಲೆ ಹಾಗೂ ಅಕ್ಕ ಪಕ್ಕದ ಗ್ರಾಮಸ್ಥರ ಸಹಕಾರದಿಂದ ಅನ್ನಸಂತರ್ಪಣೆ ಮತ್ತು ಪೂಜಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸಬೇಕೆಂದು ಗ್ರಾಮಸ್ಥರು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.