ಹುಬ್ಬಳ್ಳಿ-ಕೊಚುವೇಲಿ ಮಧ್ಯೆ ವಿಶೇಷ ರೈಲು

New Train New
Published on

ಹುಬ್ಬಳ್ಳಿ: ಓಣಂ ಹಬ್ಬದ ಪ್ರಯುಕ್ತ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಸರಿದೂಗಿಸಲು ಹುಬ್ಬಳ್ಳಿ ಮತ್ತು ಕೇರಳದ ಕೊಚುವೇಲಿ ನಿಲ್ದಾಣಗಳ ಮಧ್ಯೆ ಒಂದು ಟ್ರಿಪ್ ಓಣಂ ವಿಶೇಷ ರೈಲು ಸೇವೆ ಒದಗಿಸಲು ನೈಋತ್ಯ ರೈಲ್ವೆ ವಲಯ ನಿರ್ಧರಿಸಿದೆ.

ಎಸ್​ಎಸ್​ಎಸ್ ಹುಬ್ಬಳ್ಳಿ ಕೊಚುವೇಲಿ-ಎಸ್​ಎಸ್​ಎಸ್ ಹುಬ್ಬಳ್ಳಿ ವಿಶೇಷ ಎಕ್ಸ್​ಪ್ರೆಸ್ ರೈಲು ಸೆ. 13ರಂದು ಬೆಳಗ್ಗೆ 6.55ಕ್ಕೆ ಎಸ್​ಎಸ್​ಎಸ್ ಹುಬ್ಬಳ್ಳಿ ನಿಲ್ದಾಣದಿಂದ ಹೊರಟು, ಮಾರನೇ ದಿನ ಬೆಳಗ್ಗೆ 6.45ಕ್ಕೆ ಕೊಚುವೇಲಿ ನಿಲ್ದಾಣ ತಲುಪಲಿದೆ.

ಹಿಂದಿರುಗುವ ದಿಕ್ಕಿನಲ್ಲಿ ಸೆ. 14ರಂದು ಮಧ್ಯಾಹ್ನ 12.50ಕ್ಕೆ ಕೊಚುವೇಲಿ ನಿಲ್ದಾಣದಿಂದ ಹೊರಟು, ಮರುದಿನ ಮಧ್ಯಾಹ್ನ 12.50 ಕ್ಕೆ ಎಸ್​ಎಸ್​ಎಸ್ ಹುಬ್ಬಳ್ಳಿ ನಿಲ್ದಾಣಕ್ಕೆ ಆಗಮಿಸಲಿದೆ.

ಈ ರೈಲು ಎಸ್​ಎಂಎಂ ಹಾವೇರಿ, ರಾಣೆಬೆನ್ನೂರು, ಹರಿಹರ, ದಾವಣಗೆರೆ, ಬೀರೂರು, ಅರಸೀಕೆರೆ, ತುಮಕೂರು, ಚಿಕ್ಕಬಾಣಾವರ, ಎಸ್​ಎಂವಿಟಿ ಬೆಂಗಳೂರು, ಕೃಷ್ಣರಾಜಪುರಂ, ಬಂಗಾರಪೇಟೆ, ಸೇಲಂ, ಈರೋಡ್, ತಿರುಪ್ಪೂರು, ಕೊಯಮತ್ತೂರು, ಪಾಲಕ್ಕಾಡ್, ತ್ರಿಶೂರ್, ಅಲುವಾ, ಎರ್ನಾಕುಲಂ ಟೌನ್, ಕೊಟ್ಟಾಯಂ, ತಿರುವಲ್ಲಾ, ಚೆಂಗಣ್ಣೂರ್, ಕಾಯಂಕುಲಂ ಮತ್ತು ಕೊಲ್ಲಂ ನಿಲ್ದಾಣಗಳಲ್ಲಿ ನಿಲುಗಡೆಗೊಳ್ಳಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net