

ಮೈಸೂರು: ಪ್ರಯಾಣಿಕರ ದಟ್ಟಣೆ ನಿವಾರಿಸಲು, ಪ್ರಯಾಣಿಕರ ಬೇಡಿಕೆಯ ಮೇರೆಗೆ ಮೈಸೂರು ಮತ್ತು ತಮಿಳುನಾಡಿನ ಮನಮಧುರೈ ನಿಲ್ದಾಣಗಳ ನಡುವೆ ಒಂದು ಟ್ರಿಪ್ ವಿಶೇಷ ರೈಲನ್ನು ಓಡಿಸಲು ನಿರ್ಧರಿಸಲಾಗಿದೆ.
ಈ ವಿಶೇಷ ರೈಲು (06237) ಮಾರ್ಚ್ 11 ರಂದು ಮೈಸೂರು ನಿಲ್ದಾಣದಿಂದ ಸಂಜೆ 6.35ಕ್ಕೆ ಹೊರಟು ಮರುದಿನ ಬೆಳಗ್ಗೆ 9.10ಕ್ಕೆ ತಮಿಳುನಾಡಿನ ಮನಮಧುರೈ ನಿಲ್ದಾಣವನ್ನು ತಲುಪಲಿದೆ. ಇದೇ ರೈಲು (06238) ಮಾರ್ಚ್ 12 ರಂದು ಮಧ್ಯಾಹ್ನ 12 ಗಂಟೆಗೆ ಮನಮಧುರೈ ನಿಲ್ದಾಣದಿಂದ ಹೊರಟು ಮರುದಿನ ಬುಧವಾರ ರಾತ್ರಿ 1.55ಕ್ಕೆ ಮೈಸೂರು ನಿಲ್ದಾಣಕ್ಕೆ ಆಗಮಿಸಲಿದೆ ಎಂದು ರೈಲ್ವೆ ಇಲಾಖೆ ಪ್ರಕಟಣೆ ತಿಳಿಸಿದೆ.
ಈ ವಿಶೇಷ ರೈಲು ಎರಡೂ ದಿಕ್ಕುಗಳಲ್ಲಿ ಮಂಡ್ಯ, ಮದ್ದೂರು, ರಾಮನಗರ, ಕೆಂಗೇರಿ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ನಿಲ್ದಾಣ ಬೆಂಗಳೂರು, ಬಂಗಾರಪೇಟೆ, ತಿರುಪತ್ತೂರು, ಸೇಲಂ, ನಾಮಕ್ಕಲ್, ಕರೂರ್, ತಿರುಚ್ಚಿರಾಪಳ್ಳಿ, ದಿಂಡಿಗಲ್, ಮಧುರೈ ನಿಲ್ದಾಣಗಳಲ್ಲಿ ನಿಲುಗಡೆ ನೀಡಲಿದೆ. ಈ ವಿಶೇಷ ರೈಲಿನಲ್ಲಿ ಎರಡನೇಯ ಹವಾನಿಯಂತ್ರಿತ ದರ್ಜೆ-2, ಮೂರನೇಯ ಹವಾನಿಯಂತ್ರಿತ ದರ್ಜೆ-6, ಸ್ಲೀಪರ್ ಕ್ಲಾಸ್ ಬೋಗಿಗಳು-9, ಸಾಮಾನ್ಯ ದ್ವಿತೀಯ ದರ್ಜೆ ಬೋಗಿಗಳು-2 ಮತ್ತು ಬ್ರೇಕ್ ವ್ಯಾನ್ ಕಮ್ ಜನರೇಟರ್ ಕಾರು-2 ಸೇರಿದಂತೆ ಒಟ್ಟು 21 ಬೋಗಿಗಳನ್ನು ಒಳಗೊಂಡಿರುತ್ತವೆ.