

ಹುಬ್ಬಳ್ಳಿ : ಸ್ವಾತಂತ್ರ್ಯ ದಿನಾಚರಣೆ ಮತ್ತು ಗಣೇಶ ಚತುರ್ಥಿ ಸಮಯದಲ್ಲಿ ಪ್ರಯಾಣಿಕರ ದಟ್ಟಣೆ ನಿಯಂತ್ರಣಕ್ಕಾಗಿ ನೈಋತ್ಯ ರೈಲ್ವೆ ವಲಯ ಯಶವಂತಪುರ-ಮಡಗಾಂವ ಮತ್ತು ಎಸ್ಎಂವಿಟಿ ಬೆಂಗಳೂರು-ಬೆಳಗಾವಿ ಮಧ್ಯೆ ವಿಶೇಷ ಎಕ್ಸ್ಪ್ರೆಸ್ ರೈಲುಗಳ ಸಂಚಾರ ಸೌಲಭ್ಯ ಕಲ್ಪಿಸಿದೆ.
ಯಶವಂತಪುರ- ಮಡಗಾಂವ-ಯಶವಂತಪುರ ವಿಶೇಷ್ ಎಕ್ಸ್ಪ್ರೆಸ್ ರೈಲು ಯಶವಂತಪುರದಿಂದ ಆ. 14ರಂದು ರಾತ್ರಿ 11.55ಕ್ಕೆ ಹೊರಟು, ಮಾರನೇ ದಿನ ಸಂಜೆ 6.05ಕ್ಕೆ ಮಡಗಾಂವ ತಲುಪಲಿದೆ. ಮಡಗಾಂವದಿಂದ ಈ ರೈಲು ಆ. 17ರಂದು ರಾತ್ರಿ 10.15ಕ್ಕೆ ಹೊರಟು, ಮಾರನೇ ದಿನ ಸಂಜೆ 4.30ಕ್ಕೆ ಯಶವಂತಪುರ ತಲುಪಲಿದೆ.
ಎಸ್ಎಂವಿಟಿ ಬೆಂಗಳೂರು-ಬೆಳಗಾವಿ-ಎಸ್ಎಂವಿಟಿ ಬೆಂಗಳೂರು ವಿಶೇಷ ಎಕ್ಸ್ಪ್ರೆಸ್ ರೈಲು ಎಸ್ಎಂವಿಟಿ ಬೆಂಗಳೂರು ನಿಲ್ದಾಣದಿಂದ ಆ. 22ರಂದು ರಾತ್ರಿ 7 ಗಂಟೆಗೆ ಹೊರಟು, ಮಾರನೇ ದಿನ ಬೆಳಗ್ಗೆ 7.30ಕ್ಕೆ ಬೆಳಗಾವಿ ತಲುಪಲಿದೆ.
ಬೆಳಗಾವಿಯಿಂದ ಆ. 23ರಂದು ಸಂಜೆ 5.30ಕ್ಕೆ ಹೊರಡುವ ಈ ರೈಲು, ಮಾರನೇ ದಿನ ಬೆಳಗಿನ ಜಾವ 5 ಗಂಟೆಗೆ ಎಸ್ಎಂವಿಟಿ ಬೆಂಗಳೂರು ನಿಲ್ದಾಣ ತಲುಪಲಿದೆ.
ಮತ್ತೊಂದು ಎಸ್ಎಂವಿಟಿ ಬೆಂಗಳೂರು-ಬೆಳಗಾವಿ-ಎಸ್ಎಂವಿಟಿ ಬೆಂಗಳೂರು ವಿಶೇಷ ಎಕ್ಸ್ಪ್ರೆಸ್ ರೈಲು ಆ. 26ರಂದು ರಾತ್ರಿ 7 ಗಂಟೆಗೆ ಎಸ್ಎಂವಿಟಿ ಬೆಂಗಳೂರು ನಿಲ್ದಾಣದಿಂದ ಹೊರಟು, ಮಾರನೇ ದಿನ ಬೆಳಗ್ಗೆ 8.25ಕ್ಕೆ ಬೆಳಗಾವಿ ತಲುಪಲಿದೆ.
ಬೆಳಗಾವಿಯಿಂದ ಆ. 27ರಂದು ಸಂಜೆ 5.30ಕ್ಕೆ ಹೊರಡುವ ರೈಲು, ಮಾರನೇ ದಿನ ಬೆಳಗಿನ ಜಾವ 5 ಗಂಟೆಗೆ ಎಸ್ಎಂವಿಟಿ ಬೆಂಗಳೂರು ನಿಲ್ದಾಣ ತಲುಪಲಿದೆ.