

ಹುಬ್ಬಳ್ಳಿ: ದಸರಾ ಹಬ್ಬದ ಅಂಗವಾಗಿ ಪ್ರಯಾಣಿಕರ ದಟ್ಟಣೆ ನಿಯಂತ್ರಣಕ್ಕಾಗಿ ನೈಋತ್ಯ ರೈಲ್ವೆ ವಲಯ ಒಂದು ಟ್ರಿಪ್ ವಿಶೇಷ ರೈಲುಗಳ ಸಂಚಾರ ಆರಂಭಿಸಿದೆ.
ಎಸ್ಎಸ್ಎಸ್ ಹುಬ್ಬಳ್ಳಿ -ಯಶವಂತಪುರ ಒನ್ ವೇ ಎಕ್ಸ್ಪ್ರೆಸ್ ಸ್ಪೇಷಲ್ ರೈಲು ಸೆ. 30ರಂದು ಮಧ್ಯಾಹ್ನ 12 ಗಂಟೆಗೆ ಎಸ್ಎಸ್ಎ ಹುಬ್ಬಳ್ಳಿ ನಿಲ್ದಾಣದಿಂದ ಹೊರಟು, ಅದೇ ದಿನ ರಾತ್ರಿ 8.15ಕ್ಕೆ ಯಶವಂತಪುರ ನಿಲ್ದಾಣ ತಲುಪಲಿದೆ.
ಯಶವಂತಪುರ-ವಿಜಯಪುರ-ಎಸ್ಎಂವಿಟಿ ಬೆಂಗಳೂರು ಎಕ್ಸ್ಪ್ರೆಸ್ ರೈಲು ಸೆ. 30ರಂದು ರಾತ್ರಿ 9.50ಕ್ಕೆ ಯಶವಂತಪುರದಿಂದ ಹೊರಟು, ಮಾರನೇ ದಿನ ಬೆಳಗ್ಗೆ 9.30ಕ್ಕೆ ವಿಜಯಪುರ ತಲುಪಲಿದೆ. ಮರಳಿ ವಿಜಯಪುರದಿಂದ ಅ. 1ರಂದು ಸಂಜೆ 5.30ಕ್ಕೆ ಹೊರಟು, ಮಾರನೇ ದಿನ ಬೆಳಗ್ಗೆ 6.40ಕ್ಕೆ ಎಸ್ಎಂವಿಟಿ ಬೆಂಗಳೂರು ನಿಲ್ದಾಣ ತಲುಪಲಿದೆ.
ಮತ್ತೊಂದು ಯಶವಂತಪುರ- ವಿಜಯಪುರ-ಎಸ್ಎಂವಿಟಿ ಬೆಂಗಳೂರು ಎಕ್ಸ್ಪ್ರೆಸ್ ಸ್ಪೇಷಲ್ ರೈಲು ಅ. 2ರಂದು ರಾತ್ರಿ 7.40ಕ್ಕೆ ಯಶವಂಪುರದಿಂದ ಹೊರಟು, ಮಾರನೇ ದಿನ ಬೆಳಗ್ಗೆ 7.45ಕ್ಕೆ ವಿಜಯಪುರ ತಲುಪಲಿದೆ. ಮರಳಿ ಅ. 3ರಂದು ಸಂಜೆ 5.30ಕ್ಕೆ ವಿಜಯಪುರದಿಂದ ಹೊರಡುವ ರೈಲು, ಮಾರನೇ ದಿನ ಬೆಳಗ್ಗೆ 8.10ಕ್ಕೆ ಎಸ್ಎಂವಿಟಿ ಬೆಂಗಳೂರು ನಿಲ್ದಾಣ ತಲುಪಲಿದೆ.