

ಬೆಳ್ತಂಗಡಿ: ಪೆರೋಡಿತ್ತಾಯಕಟ್ಟೆ ಶಾಲಾ ಹಳೇ ವಿದ್ಯಾರ್ಥಿ ಸಂಘ ಹಾಗೂ ಲಯನ್ಸ್ ಕ್ಲಬ್ ಬೆಳ್ತಂಗಡಿ ಸಹಯೋಗದಲ್ಲಿ ದ.ಕ.ಜಿ.ಪ.ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಪೆರೋಡಿತ್ತಾಯಕಟ್ಟೆ, ತೆಂಕಕಾರಂದೂರು ಗ್ರಾಮದಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಮಕ್ಕಳ ಪಾಲಕರಿಗೆ ವಿಶೇಷ ಉಚಿತ ತರಬೇತಿ ಶಿಬಿರ ಕಾರ್ಯಕ್ರಮ ನಡೆಯಿತು.
ಎಸ್ಡಿಎಂಸಿ ಸಮಿತಿ ಅಧ್ಯಕ್ಷ ಮುಸ್ತಫಾ ಮಂಜೊಟ್ಟಿ ಕಾರ್ಯಕ್ರಮ ಉದ್ಘಾಟಿಸಿದರು. ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ನಜೀರ್ ವಿವಿಧ ವಿದ್ಯಾರ್ಥಿವೇತನಗಳ ಬಗ್ಗೆ ಮಾಹಿತಿ ನೀಡಿದರು. ಲಯನ್ ಸುರೇಶ್ ಎಂ.ಎಸ್. ತರಬೇತಿ ನಡೆಸಿಕೊಟ್ಟರು. ಬೆಳ್ತಂಗಡಿ ಲಯನ್ಸ್ ಕ್ಲಬ್ ಕಾರ್ಯದರ್ಶಿ ಲಯನ್ ಕಿರಣ್ ಶೆಟ್ಟಿ, ಪೆರೋಡಿತ್ತಾಯಕಟ್ಟೆ ಶಾಲೆ ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ ಉಪಸ್ಥಿತರಿದ್ದರು.
ಮುಖ್ಯಶಿಕ್ಷಕಿ ಬೆನಡಿಕ್ಟಾ ಪಾಯ್ಸ ಪ್ರಾಸ್ತವಿಕವಾಗಿ ಮಾತನಾಡಿ ಸ್ವಾಗತಿಸಿ, ಶಿಕ್ಷಕಿ ಚೈತ್ರಾ ವಂದಿಸಿದರು. ಹಳೇ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು, ಸದಸ್ಯರು, ಶಾಲಾ ಶಿಕ್ಷಕ ವೃಂದ, ಬಿಸಿಯೂಟ ಸಿಬ್ಬಂದಿ, ಪುಟಾಣಿಗಳು ಸಹಕರಿಸಿದರು.