

ಯಲ್ಲಾಪುರ: ತಾಲೂಕಿನ ಚಂದಗುಳಿಯ ಘಂಟೆ ಗಣಪತಿ ದೇವಸ್ಥಾನದಲ್ಲಿ ಅಂಗಾರಕ ಸಂಕಷ್ಟಿ ಪ್ರಯುಕ್ತ ವಿಶೇಷ ಧಾರ್ವಿುಕ ಕಾರ್ಯಕ್ರಮಗಳು ನಡೆದವು. ಪಂಚಾಮೃತಾಭಿಷೇಕ, ದೂರ್ವಾರ್ಚನೆ, ಗಣಹವನ ಮುಂತಾದ ಧಾರ್ವಿುಕ ಕಾರ್ಯಕ್ರಮ ನಡೆದವು. ದೇವರಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು. ಜಿಲ್ಲೆ ಹಾಗೂ ಹೊರ ಜಿಲ್ಲೆಗಳ ಸಾವಿರಾರು ಭಕ್ತರು ದೇವಾಲಯಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಪ್ರಾರ್ಥನೆ ಸಲ್ಲಿಸಿದರು.