ದೇವಾಲಯಗಳಲ್ಲಿ ವಿಶೇಷ ಪೂಜೆ

14M.D.R.1 (1)
ಮಹಾಲಯ ಅಮವಾಸ್ಯೆ ಅಂಗವಾಗಿ ಮದ್ದೂರು ಪಟ್ಟಣದ ಪುರಾಣ ಪ್ರಸಿದ್ಧ ಶ್ರೀ ಮದ್ದೂರಮ್ಮ ದೇವಾಲಯಲ್ಲಿ ದೇವರಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು.
Published on

ಮದ್ದೂರು: ಮಹಾಲಯ ಅಮವಾಸ್ಯೆ ಅಂಗವಾಗಿ ಪಟ್ಟಣದ ಸೇರಿದಂತೆ ತಾಲೂಕಿನ ವಿವಿಧ ದೇವಾಲಯಗಳಲ್ಲಿ ಶನಿವಾರ ವಿಶೇಷ ಪೂಜಾ ಕೈಂಕರ್ಯ ನೆರವೇರಿತು.

ಪಟ್ಟಣದ ಪುರಾಣ ಪ್ರಸಿದ್ಧ ಶ್ರೀ ಮದ್ದೂರಮ್ಮ, ಉಗ್ರ ನರಸಿಂಹಸ್ವಾಮಿ, ಹೊಳೆ ಆಂಜನೇಯಸ್ವಾಮಿ, ಕಾಶಿ ವಿಶ್ವೇಶ್ವರ ಸ್ವಾಮಿ, ವೈದ್ಯನಾಥಪುರ ಗ್ರಾಮದ ವೈದ್ಯನಾಥೇಶ್ವರ, ಆಬಲವಾಡಿಯ ತೋಪಿನ ತಿಮ್ಮಪ್ಪ, ಕದಲಿಪುರ ಗ್ರಾಮದ ಕದಲಿ ಲಕ್ಷ್ಮಿವೆಂಕಟೇಶ್ವರ ದೇವಸ್ಥಾನ ಸೇರಿದಂತೆ ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜಾ ಧಾರ್ಮಿಕ ಕಾರ್ಯಕ್ರಮ ನಡೆಯಿತು.

ಭಕ್ತರು ಮುಂಜಾನೆಯಿಂದಲೇ ದೇವರಿಗೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿ ತೀರ್ಥ, ಪ್ರಸಾದ ಸ್ವೀಕಾರ ಮಾಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net