

ಯಲ್ಲಾಪುರ: ತಾಲೂಕಿನಾದ್ಯಂತ ಗಣೇಶ ಚತುರ್ಥಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ಮನೆ ಮನೆಯಲ್ಲಿ ಗಣೇಶನಿಗೆ ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಲಾಯಿತು.
ಗಣೇಶ ಚತುರ್ಥಿ ಪ್ರಯುಕ್ತ ಚಂದಗುಳಿಯ ಘಂಟೆ ಗಣಪತಿ ದೇವಸ್ಥಾನದಲ್ಲಿ ವಿಶೇಷ ಧಾರ್ವಿುಕ ಕಾರ್ಯಕ್ರಮಗಳು ನಡೆದವು. ಪಂಚಾಮೃತಾಭಿಷೇಕ, ದೂರ್ವಾರ್ಚನೆ, ಗಣಹವನ ಸೇರಿದಂತೆ ವಿವಿಧ ಧಾರ್ವಿುಕ ಕಾರ್ಯಕ್ರಮಗಳು ನಡೆದವು. ಪಂಚಕಜ್ಜಾಯ, ಮೋದಕ, ಎಳ್ಳುಂಡೆ ಸೇರಿ ವಿವಿಧ ಭಕ್ಷ್ಯಗಳನ್ನು ಗಣಪತಿಗೆ ಸಮರ್ಪಿಸಲಾಯಿತು. ಸ್ಥಳೀಯರಷ್ಟೇ ಅಲ್ಲದೆ, ಜಿಲ್ಲೆ, ಹೊರ ಜಿಲ್ಲೆಗಳಿಂದಲೂ ಆಗಮಿಸಿದ ಸಾವಿರಾರು ಭಕ್ತರು ವಿಶೇಷ ಪೂಜೆ ಸಲ್ಲಿಸಿದರು. ರಾತ್ರಿ ಪ್ರಸಿದ್ಧ ಕಲಾವಿದರಿಂದ ‘ಮಾಗಧ ವಧೆ’ ಹಾಗೂ ‘ಶಿಶುಪಾಲ ವಧೆ’ ತಾಳಮದ್ದಲೆ ನಡೆಯಿತು.