ಶಿವರಾತ್ರಿ ಪ್ರಯುಕ್ತ ಚಂದ್ರಮೌಳೇಶ್ವರನಿಗೆ ವಿಶೇಷ ಪೂಜೆ

ಶ್ರೀ ಚಂದ್ರಮೌಳೇಶ್ವರ
ಶ್ರೀ ಚಂದ್ರಮೌಳೇಶ್ವರ
Published on

ಅರಸೀಕೆರೆ ಗ್ರಾಮಾಂತರ: ತಾಲೂಕಿನ ಹಾರನಹಳ್ಳಿ ಪುರಾಣ ಪ್ರಸಿದ್ಧ ಶ್ರೀ ಚಂದ್ರಮೌಳೇಶ್ವರ ದೇವಾಲಯದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ವಿಶೇಷ ಪೂಜೆ ಪುನಸ್ಕಾರ ಹಮ್ಮಿಕೊಳ್ಳಲಾಗಿದೆ.

ಫೆ.26ರಂದು ಶಿವರಾತ್ರಿ ಹಬ್ಬ ಹಿನ್ನೆಲೆಯಲ್ಲಿ ಸಂಜೆ 5 ಗಂಟೆಗೆ ಶ್ರೀ ಚಂದ್ರಮೌಳೇಶ್ವರ ಸ್ವಾಮಿಗೆ ಸಂಕಲ್ಪ ಗಣಪತಿ ಸನ್ನಿಧಿಯಲ್ಲಿ ಪೂಜೆ ನೆರವೇರಲಿದೆ. ಈ ವೇಳೆ ಪಂಚಾಮೃತ ಅಭಿಷೇಕ, ರುದ್ರಾಭಿಷೇಕ, ಶತಬಿಲ್ವಾರ್ಚನೆ, ಪಾರ್ವತಿ ಸನ್ನಿಧಿಯಲ್ಲಿ ಲಲಿತಾ ಸಹಸ್ರನಾಮ, ಅಷ್ಟಾವಧಾನ ಸೇವೆ ನಡೆಯಲಿದೆ. ಬಳಿಕ ಸಂಜೆ 7.30ಕ್ಕೆ ಮಹಾಮಂಗಳಾರತಿ ನೆರವೇರಲಿದೆ.

ರಾತ್ರಿ 9 ರಿಂದ 12 ಗಂಟೆವರೆಗೆ ರುದ್ರಾಭಿಷೇಕ ಪೂಜೆ ನಡೆಯಲಿದ್ದು, ರಾತ್ರಿ 12ರಿಂದ ಬೆಳಗಿನ ಜಾವ 3 ರಿಂದ 6 ಗಂಟೆವರೆಗೆ ರುದ್ರಾಭಿಷೇಕ ನೆರವೇರಲಿದೆ. ದೇವಾಲಯಕ್ಕೆ ಬರುವ ಭಕ್ತರಿಗೆ ಪ್ರಸಾದದ ವ್ಯವಸ್ಥೆ ಕಲ್ಪಿಸಲಾಗಿದೆ. ವಿಶೇಷ ಪೂಜೆ ಹೆಚ್ಚಿನ ಸಂಖೆಯಲ್ಲಿ ಭಕ್ತರು ಆಗಮಿಸುವಂತೆ ಚಂದ್ರಮೌಳೇಶ್ವರ ದೇವಾಲಯದ ಸಮಿತಿ ಕಾರ್ಯದರ್ಶಿ ಹಾರನಹಳ್ಳಿ ನಾಗೇಂದ್ರ ಮನವಿ ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net