ಬಾಳೆಎಲೆ ಮಲ್ಲಿಕಾರ್ಜುನ ಸ್ವಾಮಿಗೆ ವಿಶೇಷ ಪೂಜೆ

5-kollegalphoto-5,,,
ಕೊಳ್ಳೇಗಾಲ ತಾಲೂಕಿನ ಹಳೇ ಹಂಪಾಪುರ ಗ್ರಾಮದ ಪ್ರಸಿದ್ಧ ಶ್ರೀ ಬಾಳೆಎಲೆ ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನದಲ್ಲಿ ಭಕ್ತರು ಪೂಜೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು.
Published on

ಕೊಳ್ಳೇಗಾಲ: ತಾಲೂಕಿನ ಹಳೇ ಹಂಪಾಪುರ ಗ್ರಾಮದ ಪ್ರಸಿದ್ಧ ಶ್ರೀ ಬಾಳೆಎಲೆ ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನದಲ್ಲಿ ಶ್ರೀ ಬಾಳೆಎಲೆ ಮಲ್ಲಿಕಾರ್ಜುನ ಸ್ವಾಮಿ ಹಾಗೂ ಶ್ರೀ ಶನೈಶ್ಚರಸ್ವಾಮಿಗೆ ವಿಶೇಷ ಪೂಜಾ ಕೈಂಕರ್ಯಗಳನ್ನು ನೆರವೇರಿಸಲಾಯಿತು.

ಶ್ರೀ ಬಾಳೆಎಲೆ ಮಲ್ಲಿಕಾರ್ಜುನ ಸ್ವಾಮಿಗೆ ಮುಂಜಾನೆ ರುದ್ರಾಭಿಷೇಕ, ಮಹಾಮಂಗಳಾರತಿ, ತೀರ್ಥ ಪ್ರಸಾದ ವಿನಿಯೋಗ, ಮಹಾಪ್ರಸಾದ ವಿನಿಯೋಗ ಹಾಗೂ ನವಗ್ರಹ ಪೂಜೆ, ನವಗ್ರಹ ಹೋಮ, ಶ್ರೀಶನೈಶ್ಚರಸ್ವಾಮಿಗೆ ಪೂಜೆ, ಪೂರ್ಣಾಹುತಿ, ಕುಂಭಾಭಿಷೇಕ ಜರುಗಿತು. ಮಧ್ಯಾಹ್ನ ಅನ್ನಸಂತರ್ಪಣೆ ಮಾಡಲಾಯಿತು.

ಮೈಸೂರಿನ ನಟರಾಜು, ಹಂಪಾಪುರ ರಾಜೇಶ್ ಮತ್ತು ಮಹೇಶ್ ತಂಡ ಶ್ರೀ ಶನೈಶ್ಚರಸ್ವಾಮಿ ಹರಿಕಥೆ ನಡೆಸಿಕೊಟ್ಟರು. ದೇಗುಲದ ಪ್ರಧಾನ ಅರ್ಚಕ ಪರಮೇಶ್ವರ ಆರಾಧ್ಯ ನೇತೃತ್ವದಲ್ಲಿ ಪೂಜಾ ಕೈಂಕರ್ಯಗಳು ನೆರವೇರಿತು. ಅರ್ಚಕ ಸಂದೀಪ್ ಆರಾಧ್ಯ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net