ಶ್ರೀ ಲಕ್ಷ್ಮೀ ವೆಂಕಟೇಶ್ವರನಿಗೆ ವಿಶೇಷ ಪೂಜೆ

ಶ್ರೀ ಲಕ್ಷ್ಮೀ ವೆಂಕಟೇಶ್ವರನಿಗೆ ವಿಶೇಷ ಪೂಜೆ
Published on

ಹೊಳೆನರಸೀಪುರ: ತಾಲೂಕಿನ ಮಾವಿನಕರೆ ಶ್ರೀ ಲಕ್ಷ್ಮೀ ವೆಂಕಟೇಶ್ವರನಿಗೆ ವೈಕುಂಠ ಏಕಾದಶಿ ದಿನವಾದ ಶುಕ್ರವಾರ ವಿಶೇಷ ಅಲಂಕಾರ ಮಾಡಿ ಪೂಜಿಸಿ ಲಕ್ಷ್ಮೀ ವೆಂಕಟೇಶ್ವರ ಉತ್ಸವ ಮೂರ್ತಿಯನ್ನು ಎತ್ತರದಲ್ಲಿ ಕೂರಿಸಿ ವೈಕುಂಠ ದ್ವಾರ ನಿರ್ಮಿಸಿ ಅದರ ಕೆಳಗಡೆ ಭಕ್ತರು ಸಾಗಲು ವ್ಯವಸ್ಥೆ ಮಾಡಲಾಗಿತ್ತು.

ಪೂಜೆಯ ನಂತರ ದೇವಾಲಯಕ್ಕೆ ಆಗಮಿಸಿದ್ದ ಸಾವಿರಾರು ಭಕ್ತರಿಗೆ ಪುಳಿಯೊಗರೆ, ಪೊಂಗಲ್, ಮೊಸರನ್ನ, ಲಾಡು, ಪ್ರಸಾದ ನೀಡಿದರು.

ದೇವಾಲಯದ ಪ್ರಧಾನ ಅರ್ಚಕ ಜನಾರ್ದನ್ ಪೂಜಾ ವಿಧಿವಿಧಾನಗಳ ನೇತೃತ್ವ ವಹಿಸಿದ್ದರು. ಕಾಂಗ್ರೆಸ್ ನಾಯಕಿ ಅನುಪಮಾ, ಅರಕಲಗೂಡು ತಾಲೂಕು ಕಾಂಗ್ರೆಸ್ ಮುಖಂಡ ಕೃಷ್ಣೇಗೌಡ, ಉದ್ಯಮಿ ಎನ್.ಆರ್. ಅನಂತ್‌ಕುಮಾರ್, ರೇಖಾ ಅನಂತ್‌ಕುಮಾರ್, ತಾಲೂಕು ಕೃಷಿ ಇಲಾಖೆ ಸಹಾಯಕಿ ನಿರ್ದೇಶಕಿ ಸಪ್ನಾ ದಂಪತಿ ಹಳೇಕೋಟೆ ಗ್ರಾಮ ಪಂಚಾಯಿತಿ ಸದಸ್ಯರು ಪೂಜೆಯಲ್ಲಿ ಭಾಗವಹಿಸಿ ಪ್ರಸಾದ ಪಡೆದರು.

ದೇವಾಲಯದಲ್ಲಿ ಬೆಳಗ್ಗೆಯಿಂದ ರಾತ್ರಿ 10 ಗಂಟೆವರೆಗೂ ತೆರೆದಿದ್ದು, ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು. ತಾಲೂಕಿನ ವಿವಿಧ ದೇವಾಲಯಗಳಲ್ಲಿ ಹಾಗೂ ಪಟ್ಟಣದ ಲಕ್ಷ್ಮೀ ನರಸಿಂಹಸ್ವಾಮಿ ದೇವಾಲಯ, ದೇವಾಂಗ ರಾಮಮಂದಿರ, ಕನ್ನಿಕಾ ಪರಮೇಶ್ವರಿ ದೇವಾಲಯಗಳಲ್ಲಿ ವೈಕುಂಠ ಏಕಾದಶಿ ಅಂಗವಾಗಿ ದೇವಾಲಯದಲ್ಲಿ ವಿಶೇಷ ಪೂಜಾ ಕೈಂಕರ್ಯ ಹಮ್ಮಿಕೊಳ್ಳಲಾಗಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net