

ಕೂಡಿಗೆ: ಇಲ್ಲಿನ ಶ್ರೀ ವಿದ್ಯಾಗಣಪತಿ ಸೇವಾ ಸಮಿತಿ ಶ್ರೀ ದಂಡಿನಮ್ಮ ಮತ್ತು ಶ್ರೀ ಬಸವೇಶ್ವರ ದೇವಸ್ಥಾನ ಕೂಡಿಗೆ ಯಂಗ್ ಸ್ಟಾರ್ ಅಸೋಸಿಯೇಷನ್ ಕೂಡಿಗೆ ಹಾಗೂ ಹಾಸನ ಹಾಲು ಒಕ್ಕೂಟದ ಕೂಡಿಗೆ ಡೈರಿಯಲ್ಲಿ ಪ್ರತಿಷ್ಠಾಪಿಸಿದ ಶ್ರೀ ಗೌರಿ ಗಣೇಶ ಉತ್ಸವ ಮೂರ್ತಿಗೆ ವಿಶೇಷ ಪೂಜೆ ನೆರವೇರಿಸುವ ಮೂಲಕ ಶ್ರೀ ಗೌರಿ ಗಣೇಶ ಮೂರ್ತಿಯನ್ನು ವಿಸರ್ಜನೆ ಮಾಡಲಾಯಿತು.
ಶ್ರೀ ಗೌರಿ ಗಣೇಶ ಉತ್ಸವ ಮೂರ್ತಿಯನ್ನು ವಿದ್ಯುತ್ ದೀಪಾಲಂಕೃತ ಭವ್ಯ ಮಂಟಪದಲ್ಲಿ ಕುಳಿರಿಸಿ ಪೂಜಾ ವಿಧಿ ವಿಧಾನಗಳೊಂದಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಡಿಜೆ ಹಾಗೂ ಡೊಳ್ಳು ವಾದ್ಯಗೋಷ್ಠಿ ಹಾಗೂ ಸಿಡಿ ಮದ್ದುಗಳೊಂದಿಗೆ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು. ನಂತರ ಕಣಿವೆಯ ರಾಮಲಿಂಗೇಶ್ವರ ದೇವಸ್ಥಾನದ ಎದುರಿನ ನದಿಯಲ್ಲಿ ವಿಸರ್ಜನೆ ಮಾಡಲಾಯಿತು. ಕೂಡಿಗೆ ಡೈರಿಯಲ್ಲಿ ಪ್ರತಿವರ್ಷದಂತೆ ಸಾವಿರಾರು ಭಕ್ತಾದಿಗಳಿಗೆ ಮಧ್ಯಾಹ್ನ ಅನ್ನದಾನ ಕಾರ್ಯಕ್ರಮ ನೆರವೇರಿತು.
ನಂತರ ಪ್ರಮುಖ ಬೀದಿಗಳಲ್ಲಿ ದಿವ್ಯ ದೀಪಾಲಕೃತ ಮಂಟಪದಲ್ಲಿ ವಾದ್ಯಗೋಷ್ಠಿ ಹಾಗೂ ಸಿಡಿ ಮದ್ದುಗಳೊಂದಿಗೆ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಿ ಶ್ರೀ ಗೌರಿಗಣೇಶ ಮೂರ್ತಿಯನ್ನು ಕೂಡುಮಂಗಳೂರು ಕಾವೇರಿ ನದಿಯಲ್ಲಿ ವಿಸರ್ಜನೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಹಾಸನ ಹಾಲು ಒಕ್ಕೂಟದ ಕೊಡಗು ಜಿಲ್ಲಾ ನಿರ್ದೇಶಕ ಕೆ.ಕೆ.ಹೇಮಂತ್ ಕುಮಾರ್, ಕೂಡಿಗೆ ಡೈರಿಯ ಮೆನೇಜರ್ ನಂದೀಶ್, ಕೂಡಿಗೆ ಶ್ರೀ ವಿದ್ಯಾ ಗಣಪತಿ ಸೇವಾ ಸಮಿತಿ ಯಂಗ್ ಸ್ಟಾರ್ ಅಸೋಸಿಯೇಷನ್ ಅಧ್ಯಕ್ಷ ರಕ್ಷಿತ್ ಕುಮಾರ್, ಉಪಾಧ್ಯಕ್ಷ ಕೆ.ಎಂ.ಮಂಜುನಾಥ್, ಕಾರ್ಯದರ್ಶಿ ಡಿ.ಉಮೇಶ್, ಉಪ ಕಾರ್ಯದರ್ಶಿ ಸಂದೇಶ್, ಉಪ ಖಜಾಂಜಿ ಭರತ್, ಗೌರವ ಅಧ್ಯಕ್ಷ ಕೆ.ಟಿ.ಪ್ರವೀಣ್ ಸೇರಿದಂತೆ ಪದಾಧಿಕಾರಿಗಳಿದ್ದರು.