ಗ್ಯಾರಂಟಿ ಯೋಜನೆ ಸ್ಥಗಿತ ಊಹಾಪೋಹ

c.s.chandrabupal
ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಸಿ.ಎಸ್.ಚಂದ್ರಭೂಪಾಲ
Published on

ಶಿವಮೊಗ್ಗ: ಕರ್ನಾಟಕ ಸರ್ಕಾರದ ಮಹತ್ವದ ಐದು ಗ್ಯಾರಂಟಿ ಯೋಜನೆಗಳಾದ ಶಕ್ತಿ, ಗೃಹಜ್ಯೋತಿ, ಅನ್ನಭಾಗ್ಯ, ಗೃಹಲಕ್ಷ್ಮಿ ಹಾಗೂ ಯುವನಿಧಿ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಈ ಯೋಜನೆಗಳು ಮುಂದುವರಿಯಲಿವೆ. ಅವುಗಳನ್ನು ನಿಲ್ಲಿಸಲಾಗುವುದೆಂಬ ಊಹಾಪೋಹಗಳಿಗೆ ಸಾರ್ವಜನಿಕರು ಕಿವಿಗೊಡಬೇಡಿ ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಸಿ.ಎಸ್.ಚಂದ್ರಭೂಪಾಲ ಮನವಿ ಮಾಡಿದ್ದಾರೆ.

ಡಿಸೆಂಬರ್ ತಿಂಗಳ ಬಾಕಿ ಇರುವ ಗೃಹಲಕ್ಷ್ಮಿ ಹಣವನ್ನು ಮಾ.3ರ ಸೋಮವಾರ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗಿದೆ. ಜನವರಿ ತಿಂಗಳಿನ ಗೃಹಲಕ್ಷ್ಮಿ ಹಣದ ಬಿಲ್ಲಿಂಗ್ ಆಗುತ್ತಿದೆ. ಶೀಘ್ರವೇ ಫಲಾನುಭವಿಗಳ ಖಾತೆಗೆ ಜಮೆ ಆಗಲಿದೆ. ನಂತರ ಫೆಬ್ರವರಿ ತಿಂಗಳ ಹಣ ಬಿಡುಗಡೆಯಾಗಲಿದೆ ಎಂದು ತಿಳಿಸಿದ್ದಾರೆ.

ಅನ್ಯಭಾಗ್ಯ ಯೋಜನೆಯಡಿ ನವೆಂಬರ್ ಮತ್ತು ಡಿಸೆಂಬರ್ ತಿಂಗಳ ಹಣವನ್ನು ಕುಟುಂಬದ ಮಹಿಳಾ ಮುಖ್ಯಸ್ಥರ ಬ್ಯಾಂಕ್ ಖಾತೆಗೆ ಜಮೆಮಾಡಲಾಗಿದೆ. ಜನವರಿ ತಿಂಗಳ ಹಣ ಶೀಘ್ರದಲ್ಲೇ ಡಿಬಿಟಿ ಆಗಲಿದೆ. ಅನ್ನಭಾಗ್ಯ ಯೋಜನೆಯಡಿ ಪಡಿತರ ಚೀಟಿದಾರರಿಗೆ ಇನ್ನು ಮುಂದೆ ನಗದು ಬದಲಿಗೆ 5 ಕೆಜಿ ಅಕ್ಕಿ ವಿತರಿಸಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಫೆಬ್ರವರಿ ತಿಂಗಳಿಂದಲೇ ಜಾರಿಗೆ ಬಂದಿದೆ. ಮಾರ್ಚ್‌ನಲ್ಲಿ 15 ಕೆಜಿ ಅಕ್ಕಿ ಪ್ರತಿ ಫಲಾನುಭವಿಗಳಿಗೆ ದೊರೆಯಲಿದೆ ಎಂದು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net