

ವಿಜಯಪುರ: ಪ್ರಗತಿಯಲ್ಲಿರುವ ಇಂದಿರಾ ಕ್ಯಾಂಟೀನ್ ಕಾಮಗಾರಿಗೆ ವೇಗ ನೀಡಿ ಕಾಲಮಿತಿಯೊಳಗೆ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ಟಿ. ಭೂಬಾಲನ್ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಶುಕ್ರವಾರ ತಾಳಿಕೋಟಿಗೆ ಭೇಟಿ ನೀಡಿದ ಅವರು, ಪಟ್ಟಣದ ಹುಣಸಗಿ ರಸ್ತೆಯಲ್ಲಿ ಹೊಸದಾಗಿ ನಿರ್ಮಾಣವಾಗುತ್ತಿರುವ ಇಂದಿರಾ ಕ್ಯಾಂಟೀನ್ ಕಟ್ಟಡದ ನಿರ್ಮಾಣ ಕಾಮಗಾರಿಯ ಪ್ರಗತಿ ಪರಿಶೀಲನೆ ನಡೆಸಿದರು.
ಈ ಕಾಮಗಾರಿಯನ್ನು ಆದಷ್ಟು ಬೇಗ ಪೂರ್ಣಗೊಳಿಸಬೇಕು. ಕಟ್ಟಡವು ಗುಣಮಟ್ಟದಿಂದ ಕೂಡಿರುವಂತೆ ನೋಡಿಕೊಳ್ಳಬೇಕು. ಕ್ಯಾಂಟೀನ್ ಸುತ್ತ ತಡೆಗೋಡೆ ನಿರ್ಮಿಸಲು ಸ್ಥಳಿಯ ಮುಖ್ಯಾಧಿಕಾರಿಗೆ ಸೂಚನೆ ನೀಡಿದರು.
ಹಳೆಯ ಪುರಸಭೆಯ ಆವರಣದಲ್ಲಿನ ಗ್ರಂಥಾಲಯ ಕಟ್ಟಡವನ್ನು ಪರಿಶೀಲನೆ ನಡೆಸಿದ ಅವರು, ಈಗಿರುವ ಗ್ರಂಥಾಲಯದ ಪಕ್ಕದಲ್ಲಿರುವ ಖಾಲಿ ಜಾಗೆಯಲ್ಲಿ ಆಧುನಿಕ ಸೌಲಭ್ಯಯುಳ್ಳ ಅತ್ಯುತ್ತಮ ಸ್ಮಾರ್ಟ್ ಗ್ರಂಥಾಲಯ ನಿರ್ಮಾಣಕ್ಕಾಗಿ ನೀಲಿ ನೆ ಸಿದ್ಧಪಡಿಸಿ ಪ್ರಸ್ತಾವನೆ ಸಲ್ಲಿಸುವಂತೆ ಸೂಚನೆ ನೀಡಿದರು.
ಜಿಪಂ ಸಿಇಒ ರಿಷಿ ಆನಂದ, ಜಿಪಂ ಮುಖ್ಯ ಯೋಜನಾಧಿಕಾರಿ ನಿಂಗಪ್ಪ ಗೋಠೆ, ಜಿಲ್ಲಾ ಕೌಶಲ್ಯಾಭಿವೃದ್ಧಿಕಾರಿ ಸಿ.ಬಿ. ಕುಂಬಾರ, ತಾಳಿಕೋಟಿ ತಹಸೀಲ್ದಾರ್ ಪ್ರೇಮಸಿಂಗ್ ಪವಾರ, ಮುಖ್ಯಾಧಿಕಾರಿ ಮೋಹನ ಜಾಧವ, ಆರೋಗ್ಯ ನಿರೀಕ ಶಿವಾನಂದ ಜುಮನಾಳ ಮತ್ತಿತರರಿದ್ದರು.