ಕಡಲ್ಕೊರೆತ ಪ್ರದೇಶಗಳಿಗೆ ಸ್ಪೀಕರ್ ಭೇಟಿ

mng-29july-khader
Published on


ಮಂಗಳೂರು : ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್ ಅವರು ಸೋಮವಾರ ಉಳ್ಳಾಲ ಕಡಲ್ಕೊರೆತ ಪ್ರದೇಶಗಳಿಗೆ ಭೇಟಿ ನೀಡಿದರು.
ಉಳ್ಳಾಲದ ಕೋಟೆಪುರ, ಮೊಗವೀರ ಪಟ್ಣ ಮತ್ತಿತರ ಪ್ರದೇಶಗಳಿಗೆ ಭೇಟಿ ನೀಡಿದ ಅವರು ಕಡಲ್ಕೊರೆತ ಹಾನಿಯನ್ನು ವೀಕ್ಷಿಸಿ
ನಿಯಂತ್ರಣ ಕ್ರಮಗಳನ್ನು ಪರಿಶೀಲಿಸಿದರು. ಸ್ಥಳಿಯರ ಅಹವಾಲುಗಳನ್ನು ಆಲಿಸಿದ ಅವರು, ಕಡಲ್ಕೊರೆತದಿಂದ ಆಗುವ ಹಾನಿಯನ್ನು ಕಡಿಮೆಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಕಡಲ್ಕೊರೆತ ನಿಯಂತ್ರಿಸಲು ಪ್ರತಿಬಂಧಕ ಕ್ರಮಗಳನ್ನು ಕೈಗೊಳ್ಳಲು ಅವರು ಅಧಿಕಾರಿಗಳಿಗೆ ಸೂಚಿಸಿದರು. ಮಂಗಳೂರು ಉಪ ವಿಭಾಗಾಧಿಕಾರಿ ಹರ್ಷವರ್ಧನ್, ಉಳ್ಳಾಲ ತಹಶಿಲ್ದಾರ್ ಪುಟ್ಟರಾಜು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net