ಮೂರುಸಾವಿರ ಮಠದಲ್ಲಿ ಆಧ್ಯಾತ್ಮಿಕ ಚಿಂತನ ಸಭೆ

Published on

ಹುಬ್ಬಳ್ಳಿ: ಇಲ್ಲಿಯ ಮೂರುಸಾವಿರ ಮಠದ ವತಿಯಿಂದ ಶ್ರೀ ಗಂಗಾ ಯೋಗ ನಿಸರ್ಗ ಚಿಕಿತ್ಸೆ ಮತ್ತು ಆಯುರ್ವೇದ ಸಂಶೋಧನಾ ಕೇಂದ್ರದ ಸಹಯೋಗದಲ್ಲಿ ಜೂನ್ 21 ಹಾಗೂ 22ರಂದು ಸಂಜೆ 6.30ಕ್ಕೆ ಎರಡು ದಿನ ಮೂರುಸಾವಿರ ಮಠದ ಪ್ರಾಂಗಣದಲ್ಲಿ ವಿಶೇಷ ಆರೋಗ್ಯ ಮತ್ತು ಆಧ್ಯಾತ್ಮಿಕ ಚಿಂತನ ಕಾರ್ಯಕ್ರಮ ಏರ್ಪಡಿಸಲಾಗಿದೆ.

ಆಯುರ್ವೇದ ಚಿಕಿತ್ಸೆಯಲ್ಲಿ ಅನುಭವ ಹೊಂದಿರುವ, ಯೋಗ ಗುರು ವೈದ್ಯಶ್ರೀ ಚನ್ನಬಸವಣ್ಣ ಅವರು ಶಿಬಿರ ನಡೆಸಿಕೊಡಲಿದ್ದಾರೆ. ಮೂರುಸಾವಿರ ಮಠದ ಜಗದ್ಗುರು ಶ್ರೀ ಡಾ. ಗುರುಸಿದ್ದರಾಜಯೋಗೀಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸುವರು.

ಸಾರ್ವಜನಿಕರು, ಭಕ್ತರು ಚಿಂತನ ಕಾರ್ಯಕ್ರಮದಲ್ಲಿ ಭಾಗಿಯಾಗಿ ಆರೋಗ್ಯದ ಸದುಪಯೋಗ ಪಡೆಯಬೇಕೆಂದು ಶ್ರೀಮಠದ ಆಡಳಿತಾಧಿಕಾರಿಗಳು ಪ್ರಕಟಣೆಯಲ್ಲಿ ಕೋರಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net