

ಹನುಮಸಾಗರ: ವಿದ್ಯಾರ್ಥಿಗಳು ಶಾಲೆಯಲ್ಲಿ ಪಾಠ ಕಲಿಕೆ ಜತೆಗೆ ಕ್ರೀಡಾ ಚಟುವಟಿಕೆಗಳಲ್ಲಿಯೂ ಪಾಲ್ಗೊಳ್ಳಬೇಕು ಎಂದು ಬಿಜೆಪಿ ತಾಲೂಕಾಧ್ಯಕ್ಷ ಬಸವರಾಜ ಹಳ್ಳೂರು ಹೇಳಿದರು.
ಪಟ್ಟಣದ ಕರ್ನಾಟಕ ಪಬ್ಲಿಕ್ ಸ್ಕೂಲ್ ಆವರಣದಲ್ಲಿ ಶುಕ್ರವಾರ ಹಮ್ಮಿಕೊಂಡ ಪ್ರೌಢ ಶಾಲೆಗಳ ವಲಯ ಮಟ್ಟದ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು. ಕ್ರೀಡೆಯಲ್ಲಿ ಸೋಲು ಗೆಲುವುಗಳನ್ನು ಲೆಕ್ಕ ಹಾಕುವ ಮೊದಲು ಭಾಗವಹಿಸುವುದನ್ನು ಕಲಿಯಬೇಕು.
ದೈನಂದಿನ ಜೀವನದಲ್ಲಿ ಸ್ವಲ್ಪ ಸಮಯವನ್ನು ಕ್ರೀಡೆಗೆ ಮೀಸಲಿಟ್ಟರೆ ದೈಹಿಕ ಹಾಗೂ ಮಾನಸಿಕ ಒತ್ತಡದಿಂದ ಮುಕ್ತರಾಗಿ,
ಆರೋಗ್ಯವಂತರಾಗಿ ಇರುತ್ತೇವೆ. ಮಕ್ಕಳು ದೇಶದ ಆಸ್ತಿ, ಕ್ರೀಡೆಯಲ್ಲಿ ಪಾಲ್ಗೊಳ್ಳುವ ಮೂಲಕ ದೇಹವನ್ನು ಸದೃಢವಾಗಿ ಇಟ್ಟುಕೊಳ್ಳಬೇಕು.
ಮುಂದೆ ಎಂತಹ ಕಠಿಣ ಕೆಲಸಗಳನ್ನಾದರು ಮಾಡಲು ಸಾಧ್ಯ. ಶಿಕ್ಷಕರು ಮಕ್ಕಳಲ್ಲಿ ಇರುವ ಪ್ರತಿಭೆಯನ್ನು ಗುರುತಿಸಿ, ಸೂಕ್ತ ತರಬೇತಿ ನೀಡಿ, ಪ್ರೋತ್ಸಾಹಿಸಿ.
ವಿದ್ಯಾಭ್ಯಾಸಕ್ಕೆ ಹಾಗೂ ಕ್ರೀಡೆಗೆ ಸರ್ಕಾರ ಅನೇಕ ಸೌಲಭ್ಯಗಳನ್ನು ನೀಡುತ್ತಿದ್ದು, ಅವುಗಳ ಸದುಪಯೋಗ ಪಡಿಸಿಕೊಂಡು, ಕುಟುಂಬ ಹಾಗೂ ಗ್ರಾಮದ ಕೀರ್ತಿ ಹೆಚ್ಚಿಸಿಬೇಕು ಎಂದರು.
ಗ್ರಾಪಂ ಅಧ್ಯಕ್ಷ ರುದ್ರಗೌಡ ಗೌಡಪ್ಪನವರ, ಉಪಾಧ್ಯಕ್ಷೆ ಹನಮಮ್ಮ ಕಂದಗಲ್, ದೈಹಿಕ ಶಿಕ್ಷಣ ಪರಿವೀಕ್ಷಕ ನಾಗಪ್ಪ ಬಿಳಿಯಪ್ಪನವರ, ಮುಖಂಡರಾದ ನಾಗರಾಜ ಕಂದಗಲ್ಲ, ಸೂಚಪ್ಪ ದೇವರಮನಿ,
ಗ್ರಾಪಂ ಸದಸ್ಯರಾದ ಶಿವಪ್ಪ ಕಂಪ್ಲಿ, ಭವಾನಿಸಾ ಪಾಟೀಲ, ಬಸವರಾಜ ಅಕ್ಕಿ, ಬಸವರಾಜ ದ್ಯಾವಣ್ಣವರ, ಮರೇಗೌಡ ಬೋದುರ, ಚಂದ್ರು ಬೆಳಗಲ್ಲ, ರಮೇಶ ಬಡಿಗೇರ, ಪ್ರಶಾಂತ ಕುಲಕರ್ಣಿ, ವಿವಿಧ ಶಾಲೆಗಳ ಮುಖ್ಯ ಶಿಕ್ಷಕರು, ದೈಹಿಕ ಶಿಕ್ಷಕರು ಮತ್ತು ಶಿಕ್ಷಕರು ಇತರರಿದ್ದರು.