ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ

14blrp2
Published on

ಬೇಲೂರು: ಕ್ರೀಡೆಯಲ್ಲಿ ಸೋಲು ಗೆಲುವು ಸಾಮಾನ್ಯ. ಆದರೆ ಕ್ರೀಡೆಯಲ್ಲಿ ಭಾಗವಹಿಸುವುದರಿಂದ ಪ್ರತಿಯೊಬ್ಬರಲ್ಲೂ ಮಾನಸಿಕ ಆತ್ಮಸ್ಥೈರ್ಯ ವೃದ್ಧಿಯಾಗುತ್ತದೆ ಎಂದು ಅರೇಹಳ್ಳಿ ಸರ್ಕಾರಿ ಪ್ರೌಢಶಾಲೆ ಶಿಕ್ಷಕ ಮಂಜುನಾಥ್ ಹೇಳಿದರು.
ತಾಲೂಕಿನ ಅರೇಹಳ್ಳಿ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಅರೇಹಳ್ಳಿ ಜಮಾಅತೆ ಇಸ್ಲಾಮೀ ಹಿಂದ್ ವತಿಯಿಂದ ಶನಿವಾರ ಆಯೋಜಿಸಿದ್ದ 13ನೇ ಗುಲಿಸ್ತಾನ್ ಚಿಲ್ಡ್ರನ್ ಫೆಸ್ಟಿವಲ್ ಕಾರ್ಯಕ್ರಮದ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಕ್ರೀಡಾ ಮನೋಭಾವ ಮೂಡಿಸಲು ಇಂತಹ ಕಾರ್ಯಕ್ರಮ ಸಹಕಾರಿಯಾಗುತ್ತದೆ ಎಂದರು. ಜಮಾಅತೆ ಇಸ್ಲಾಮೀ ಹಿಂದ್ ನಿಕಟಪೂರ್ವ ಸ್ಥಾನಿಯ ಅಧ್ಯಕ್ಷ ಮುಜೀಬುರ್ ರೆಹಮಾನ್, ಅರೇಹಳ್ಳಿ ಘಟಕ ಅಧ್ಯಕ್ಷ ಮೌಲಾನಾ ಅಬ್ದುಲ್ಲಾ ಉಮ್ರಿ ಸೇರಿದಂತೆ ಸಂಘಟನೆಯ ಪದಾಧಿಕಾರಿಗಳು ಭಾಗವಹಿಸಿದ್ದರು.

ಚಿತ್ರ:14(ಬಿಎಲ್‌ಆರ್)2-
ಅರೇಹಳ್ಳಿಯ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಜಮಾಅತೆ ಇಸ್ಲಾಮೀ ಹಿಂದ್ ವತಿಯಿಂದ ಆಯೋಜಿಸಿದ್ದ ಚಿಲ್ಡ್ರನ್ ಫೆಸ್ಟಿವಲ್‌ನಲ್ಲಿ ಭಾಗವಹಿಸಿರುವ ಮಕ್ಕಳು

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net