ಎಪ್ರಿಲ್‌ನಲ್ಲಿ ಜಿಲ್ಲ ಮಟ್ಟದ ಕ್ರೀಡಾಕೂಟ

sports
Published on

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ಕ್ರೀಡಾಂಗಣದಲ್ಲಿ ಏಪ್ರಿಲ್ ತಿಂಗಳಲ್ಲಿ ಜಿಲ್ಲಾ ಮಟ್ಟದ ಸರಕಾರಿ ನೌಕರರ ಕ್ರೀಡಾಕೂಟ ಆಯೋಜಿಸಲಾಗುವುದು ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ತಿಳಿಸಿದರು.

ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳ ಆಯೋಜನೆ ಕುರಿತ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ಪ್ರತಿ ವರ್ಷದಂತೆ ಈ ವರ್ಷವೂ ಕ್ರೀಡಾಕೂಟ ಆಯೋಜಿಸಲಾಗುತ್ತಿದ್ದು, ಶಿಷ್ಟಾಚಾರದಂತೆ ಆಹ್ವಾನ ಪತ್ರಿಕೆ ಮುದ್ರಿಸಿ ಗಣ್ಯರನ್ನ ಆಹ್ವಾನಿಸಬೇಕು. ಕ್ರೀಡಾಕೂಟಕ್ಕೆ ಪೂರ್ವ ಸಿದ್ಧತೆ ಕೈಗೊಂಡು ಕ್ರೀಡಾಕೂಟದಲ್ಲಿ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸಬೇಕು, ಸ್ಥಳದಲ್ಲಿ ಆಂಬುಲೆನ್ಸ್ ಸೇವೆ ಸೇರಿ ಅಗತ್ಯ ಮೂಲ ಸೌಕರ್ಯಗಳನ್ನು ಒದಗಿಸಿ ಕ್ರೀಡಾಕೂಟ ಯಶಸ್ವಿಯಾಗಿ ನಡೆಸಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

-------

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net