ಇಂದು, ನಾಳೆ ವಲಯ ಮಟ್ಟದ ಕ್ರೀಡಾಕೂಟ

Sports- 5
Published on

ಶನಿವಾರಸಂತೆ: ಶಿಕ್ಷಣ ಇಲಾಖೆ ಮತ್ತು ಶನಿವಾರಸಂತೆ ಶ್ರೀ ವಿಘ್ನೇಶ್ವರ ಗೋಲ್ಡನ್ ಆಂಗ್ಲ ಮಾಧ್ಯಮ ಶಾಲೆ ಸಹಯೋಗದಲ್ಲಿ 2025-26ನೇ ಸಾಲಿನ ಶನಿವಾರಸಂತೆ ವಲಯ ಮಟ್ಟದ 14ವರ್ಷದ ವಯೋಮಿತಿಯ ಕ್ರೀಡಾಕೂಟವು ಆ.22, 23ರಂದು ವಿಘ್ನೇಶ್ವರ ಗೋಲ್ಡನ್ ಆಂಗ್ಲ ಮಾಧ್ಯಮ ಶಾಲೆಯ ಆಟದ ಮೈದಾನದಲ್ಲಿ ನಡೆಯಲಿದೆ ಎಂದು ವಿದ್ಯಾಸಂಸ್ಥೆಯ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಳಗ್ಗೆ 9.30ಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಕೃಷ್ಣಪ್ಪ ಕ್ರೀಡಾಕೂಟ ಉದ್ಘಾಸಲಿದ್ದಾರೆ. ವಿದ್ಯಾಸಂಸ್ಥೆ ಅಧ್ಯಕ್ಷ ಬಿ.ಬಿ.ಲೋಕೇಶ್ ಅಧ್ಯಕ್ಷತೆ ವಹಿಸಲಿದ್ದು, ವಿಘ್ನೇಶ್ವರ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಸಿ.ಎನ್.ಬೆಳ್ಳಿಯಪ್ಪ ಕ್ರೀಡಾ ಧ್ವಜರೋಹಣ ನೆರವೇಸಲಿದ್ದಾರೆ. ದುಂಡಳ್ಳಿ ಗ್ರಾ.ಪಂ.ಅಧ್ಯಕ್ಷೆ ಭವಾನಿ ಗುರು, ಶನಿವಾರಸಂತೆ ಗ್ರಾ.ಪಂ.ಅಧ್ಯಕ್ಷೆ ಗೀತಾ ಹರೀಶ್, ದೈಹಿಕ ಶಿಕ್ಷಣ ಪರಿವೀಕ್ಷಕ ಸುಕುಮಾರಿ, ಸಿಆರ್‌ಪಿ ಸಿ.ಕೆ.ದಿನೇಶ್, ವಿದ್ಯಾಸಂಸ್ಥೆ ಉಪಾಧ್ಯಕ್ಷ ಕೃಷ್ಣರಾಜು, ವಿಘ್ನೇಶ್ವರ ಬಾಲಕಿಯರ ಪ.ಪೂ.ಕಾಲೇಜು ಪ್ರಾಂಶುಪಾಲ ಶಿವಪ್ರಕಾಶ್ ಭಾಗವಹಿಸಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net