

ಬೇಲೂರು: ಇತ್ತೀಚೆಗೆ ನಡೆದ ವಲಯ ಮಟ್ಟದ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟದಲ್ಲಿ ಬಾಲಕಿ ಹಾಗೂ ಬಾಲಕರ ವಿಭಾಗದಲ್ಲಿ ನಮ್ಮ ಶಾಲೆಯ ಕ್ರೀಡಾಪಟುಗಳು ಸಮಗ್ರ ಪ್ರಶಸ್ತಿ ಪಡೆಯುವ ಮೂಲಕ ಶಾಲೆಗೆ ಕೀರ್ತಿ ತಂದಿದ್ದಾರೆ ಎಂದು ದಿವ್ಯ ಆಂಗ್ಲ ಮಾಧ್ಯಮ ಶಾಲೆ ಸಂಸ್ಥಾಪಕ ಅಧ್ಯಕ್ಷ ಗೌಡೇಗೌಡ ತಿಳಿಸಿದ್ದಾರೆ.
ಬಾಲಕೀಯರ ವಿಭಾಗದಲ್ಲಿ 100, 200 ಮೀಟರ್ ಓಟ ಮತ್ತು ಉದ್ದ ಜಿಗಿತದಲ್ಲಿ ಚಿನ್ಮಯ್ ಪ್ರಥಮ, ಚಕ್ರ ಎಸೆತದಲ್ಲಿ ಲಿಖಿತ್ ಪ್ರಥಮ, ಅಲಿಜ್ಹಾ ಫಾತಿಮಾ ಗುಂಡು ಎಸೆತದಲ್ಲಿ ದ್ವಿತೀಯ, ಉದ್ದ ಜಿಗಿತದಲ್ಲಿ ನಮ್ರತಾ ದ್ವಿತೀಯ, ಬಾಲಕಿಯರ ತಂಡ ಖೋ ಖೋ, ಥ್ರೋ ಬಾಲ್, ವಾಲಿಬಾಲ್ ಪ್ರಥಮ ಸ್ಥಾನ ಪಡೆಯುವ ಮೂಲಕ ಸಮಗ್ರ ಪ್ರಶಸ್ತಿ ಪಡೆದಿದೆ. ಬಾಲಕಿಯರ ವೈಯಕ್ತಿಕ ಪ್ರಶಸ್ತಿಯನ್ನು ನಮ್ಮ ಶಾಲೆಯ ವಿದ್ಯಾರ್ಥಿನಿ ಚಿನ್ಮಯ್ ಮುಡಿಗೇರಿಸಿಕೊಂಡಿದ್ದಾರೆ.
ಬಾಲಕರ ವಿಭಾಗದಲ್ಲಿ ಚಕ್ರ ಎಸೆತ ಮತ್ತು ಎತ್ತರ ಜಿಗಿತದಲ್ಲಿ ಯಶ್ವಂತ್ ಪ್ರಥಮ, 400 ಮೀಟರ್ ಓಟ ಮತ್ತು ಎತ್ತರ ಜಿಗಿತದಲ್ಲಿ ಪ್ರಣವ್ ಪ್ರಥಮ ಹಾಗೂ ದ್ವಿತೀಯ, ಉದ್ದ ಜಿಗಿತದಲ್ಲಿ ಅರ್ಮಾನ್ ಪ್ರಥಮ, ಶೈಜಾನ್ ದ್ವಿತೀಯ, ಬಾಲಕರ ಥ್ರೋ ಬಾಲ್ ಮತ್ತು ಕಬಡ್ಡಿಯಲ್ಲಿ ಪ್ರಥಮ ಸ್ಥಾನ ಗಳಿಸಿ ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವೈಯಕ್ತಿಕ ಪ್ರಶಸ್ತಿಯನ್ನು ಯಶ್ವಂತ್ ಮುಡಿಗೇರಿಸಿಕೊಳ್ಳುವ ಮೂಲಕ ಬಾಲಕ ಹಾಗೂ ಬಾಲಕೀಯರ ವಿಭಾಗದಲ್ಲಿ ಸಮಗ್ರ ಪ್ರಶಸ್ತಿಯನ್ನು ಪಡೆದಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದಿವ್ಯ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕ ಉಮೇಶ್, ಪ್ರೌಢಶಾಲಾ ಮುಖ್ಯ ಶಿಕ್ಷಕ ಚೇತನ್ ಸೇರಿದಂತೆ ಇತರರು ವಿಜೇತರನ್ನು ಅಭಿನಂದಿಸಿದ್ದಾರೆ.