

ಮಡಿಕೇರಿ:
ಮೂರ್ನಾಡು ಸಹಕಾರ ಸ್ಪೋರ್ಟ್ಸ್ ಕ್ಲಬ್‌ನ ವತಿಯಿಂದ ಮೂರ್ನಾಡು ವಿದ್ಯಾಸಂಸ್ಥೆಯ ಬಾಚೆಟ್ಟಿರ ಲಾಲು ಮುದ್ದಯ್ಯ ಕ್ರೀಡಾಂಗಣದಲ್ಲಿ ಗುರುವಾರ ಆಯೋಜಿಸಿದ್ದ 101ನೇ ವಾರ್ಷಿಕ ಕೈಲ್ ಮುಹೂರ್ತ ಹಬ್ಬದ ಆಟೋಟಗಳ ಕಾರ್ಯಕ್ರಮವನ್ನು ತೆಂಗಿನಕಾಯಿಗೆ ಗುಂಡು ಹೊಡೆಯುವÀ ಮೂಲಕ ಮೂರ್ನಾಡು ಪೊಲೀಸ್ ಉಪಠಾಣೆಯ ಅಧಿಕಾರಿ ಪಟ್ರಪಂಡ ಮೊಣ್ಣಪ್ಪ ಉದ್ಘಾಟಿಸಿರು.
ನಂತರ ಕೊಡಗಿನ ಯುವಜನತೆ ಎಲ್ಲರೂ ಕ್ರೀಡಾಪುಟುಗಳಾಗಬೇಕು. ಮೂರ್ನಾಡು ಪಕ್ಕದಲ್ಲಿಯೆ ಅಂತಾರಾಷ್ಟಿçÃಯ ಕ್ರೀಡಾಂಗಣ ನಿರ್ಮಾಣವಾಗುತ್ತಿದ್ದು, ಕ್ರೀಡೆಯ ಬೆಳವಣಿಗೆಗೆ ಪೂರಕವಾಗಿದೆ. ಕೈಲ್ ಮುಹೂರ್ತ ಹಬ್ಬವನ್ನು ಬಹಳ ಸಂಭ್ರಮ ಸಡಗರದಿಂದ ಆಚರಿಸುತ್ತಾರೆ. ಹಬ್ಬದ ದಿನದಂದು ಎಲ್ಲ್ಲರೂ ಒಟ್ಟಾಗಿ ಸೇರಿ, ಕ್ರೀಡಾ ಚಟುವಟಿಕೆಗಳಲ್ಲಿ ಪ್ರತಿಯೊಬ್ಬರೂ ಪಾಲ್ಗೊಳ್ಳಬೇಕು ಎಂದು ಹೇಳಿದರು.
ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಮೂರ್ನಾಡು ಪಶುವೈದ್ಯಾಧಿಕಾರಿ ಡಾ. ಶಿಲ್ಪ ಯಂಕನ ಮಾತನಾಡಿ ಒಂದು ಸಂಘವು ಶತಮಾನೋತ್ಸವ ಆಚರಿಸಿಕೊಂಡಿದೆ ಎಂದರೆ ಅಲ್ಲಿ ವ್ಯವಸ್ಥಿತವಾದ ಆಡಳಿತಾತ್ಮಕತೆ, ಸಂಘಟನೆ ಇದ್ದಾಗ ಮಾತ್ರ ಸಾಧ್ಯ. ಇಂತಹ ಕ್ರೀಡೆಗಳಲ್ಲಿ ಪ್ರತಿಯೊಬ್ಬರೂ ಭಾಗವಹಿಸಬೇಕು. ಎಲ್ಲರೂ ಗೆಲ್ಲಲು ಸಾಧ್ಯವಿಲ್ಲ, ಭಾಗವಹಿಸುವಿಕೆ ಮನಸ್ಸಿಗೆ ಸಂತೋಷ ತಂದುಕೊಡುತ್ತದೆ. ಸೋಲು ಗೆಲವು ಆನಂತರದ ವಿಷಯವಾಗುತ್ತದೆ ಎಂದು ಹೇಳಿದರು.
ಸಹಕಾರ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷ ಮುಂಡAಡ ಪವಿ ಸೋಮಣ್ಣ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಕ್ಲಬ್‌ನ ಗೌರವ ಕಾರ್ಯದರ್ಶಿ ಮೇರ್ಕಜೆ ಲೋಹಿತ್ ಸೋಮಯ್ಯ, ನಿರ್ದೇಶಕರುಗಳಾದ ಪುದಿಯೊಕ್ಕಡ ಪೊನ್ನು ಮುತ್ತಪ್ಪ, ಮೂಡೇರ ಮನು ಮಾದಪ್ಪ, sಕೋಟೇರ ಮೇದಪ್ಪ, ಬೈಲೆ ತಿಮ್ಮಯ್ಯ, ಪುದಿಯೊಕ್ಕಡ ಕಾಶಿ ಕರುಂಬಯ್ಯ, ಪೆಮ್ಮಂಡ ಪವಿತ್ರ, ಕ್ಲಬ್‌ನ ಮಾಜಿ ಅಧ್ಯಕ್ಷರುಗಳಾದ ಚೇನಂಡ ಅಶೋಕ್, ಪಳಂಗAಡ ಅಪ್ಪಣ್ಣ ಮತ್ತು ಪುದಿಯೊಕ್ಕಡ ಬೆಲ್ಲು ಸೋಮಯ್ಯ, ಮೂಡೇರ ಹರೀಶ್ ಕಾಳಯ್ಯ ಇದ್ದರು.
ಸಭಾ ಕಾರ್ಯಕ್ರಮದ ನಂತರ ಪುರುಷರು, ಮಹಿಳೆಯರು, ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ವಿವಿಧ ಓಟದ ಸ್ಪರ್ಧೆಗಳು, ಭಾರದ ಕಲ್ಲು ಎಸೆತ, ನಿಂಬೆಹಣ್ಣು ಚಮಚ ಓಟ, ವಯಸ್ಕರ ಓಟ, ಕಾಲುಕಟ್ಟಿ ಓಟ, ವಾದ್ಯದ ಕುಣಿತ ಸ್ಪರ್ಧೆಗಳು ನಡೆದವು.
ಕಾಂತೂರು ಮೂರ್ನಾಡು ಗ್ರಾಮ ಪಂಚಾಯಿತಿಗೆ ಸಂಬAಧಪಟ್ಟ ಆರು ಗ್ರಾಮಗಳ ಪುರುಷರು ತಂಡಗಳ ಮಧ್ಯೆ ನಡೆದ ಹಗ್ಗ ಜಗ್ಗಾಟ ಪಂದ್ಯಾಟದಲ್ಲಿ ಬಾಡಗ ಗ್ರಾಮದ ತಂಡ ಕಿಗ್ಗಾಲು ಗ್ರಾಮದ ತಂಡವನ್ನು ಸೋಲಿಸಿ ಪ್ರಥಮ ಸ್ಥಾನವನ್ನು ಪಡೆದುಕೊಂಡಿತು. ಮಹಿಳೆಯರ ಹಗ್ಗ ಜಗ್ಗಾಟದಲ್ಲಿ ಕಿಗ್ಗಾಲು ಗ್ರಾಮದ ತಂಡ ಬಾಡಗ ಗ್ರಾಮದ ತಂಡವನ್ನು ಸೋಲಿಸಿ ಪ್ರಥಮ ಸ್ಥಾನವನ್ನು ತನ್ನದಾಗಿಸಿಕೊಂಡಿತು.
ಸಾರ್ವಜನಿಕರಿಗೆ ತೆಂಗಿನಕಾಯಿಗೆ ಗುಂಡುಹೊಡೆಯುವ ಸ್ಪರ್ಧೆಯಲ್ಲಿ ಮುಂಡAಡ ಬೋಪಣ್ಣ ಪ್ರಥಮ, ಕುಚಿಲ್ಲಂಡ ದಿಲನ್ ದೇವಯ್ಯ ದ್ವಿತೀಯ ಹಾಗೂ ಬಡುವಂಡ ಮುತ್ತಪ್ಪ ತೃತೀಯ ಬಹುಮಾನ ಪಡೆದುಕೊಂಡರು.