ಹರ್ಡಲ್ಸ್‌ನಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

sports
Published on

ಮಡಿಕೇರಿ:

ಭಾಗಮಂಡಲದ ಅಟಲ್ ಬಿಹಾರಿ ವಾಜಪೇಯಿ ವಸತಿ ವಿಜ್ಞಾನ ಕಾಲೇಜಿನ ವಿದ್ಯಾರ್ಥಿಗಳು ಗೋಣಿಕೊಪ್ಪಲುವಿನಲ್ಲಿ ಈಚೆಗೆ ನಡೆದ ಜಿಲ್ಲಾ ಮಟ್ಟದ ಅಥ್ಲೆಟಿಕ್‌ನ 400 ಮೀಟರ್ ಹರ್ಡಲ್ಸ್ನಲ್ಲಿ ಭಾಗವಹಿಸಿ ರಾಜ್ಯಮಟ್ಟಕ್ಕೆ ಆಯ್ಕೆ ಆಗಿದ್ದಾರೆ.

ಸಂಸ್ಥೆಯ ಕೆ.ಎಂ. ಖುಷಿ ಪ್ರಥಮ ಮತ್ತು ಟಿ.ಎಸ್. ಸಾಗರ್ ದ್ವಿತೀಯ ಸ್ಥಾನ ಪಡೆದು ಕಲುಬುರ್ಗಿಯಲ್ಲಿ ನಡೆಯುವ ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ ಆಗಿದ್ದಾರೆ. ಪ್ರಾಂಶುಪಾಲ ಲೋಕೇಶ್, ನಿಲಯ ಪಾಲಕ ಕೆ. ಕೆ. ದೀಪಕ್, ದೈಹಿಕ ಶಿಕ್ಷಣ ಶಿಕ್ಷಕ ಕೆ.ಪಿ. ಪವನ್ ಸಾಗರ್ ವಿದ್ಯಾರ್ಥಿಗಳ ಸಾಧನೆಗೆ ಅಗತ್ಯ ಪ್ರೋತ್ಸಾಹ ನೀಡಿದ್ದರು ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net