

ಹುಬ್ಬಳ್ಳಿ: ಇಲ್ಲಿಯ ಕೆಎಲ್ಇ ಸಂಸ್ಥೆಯ ಗುರುಸಿದ್ದಪ್ಪ ಕೋತಂಬ್ರಿ ಕಾನೂನು ಮಹಾವಿದ್ಯಾಲಯದಲ್ಲಿ ಕಾಲೇಜು ಒಕ್ಕೂಟ ಹಾಗೂ ಕ್ರೀಡಾ ಚಟುವಟಿಕೆಗಳ ಉದ್ಘಾಟನೆ ಮತ್ತು ರಾಷ್ಟ್ರೀಯ ಕಾನೂನು ಸೇವೆಗಳ ದಿನಾಚರಣೆ ಶನಿವಾರ ಆಯೋಜಿಸಲಾಗಿತ್ತು.
ತಾಲೂಕು ಕಾನೂನು ಸೇವಾ ಸಮಿತಿ ಸದಸ್ಯ ಕಾರ್ಯದಶಿರ್, ಪ್ರಭಾರ ಪ್ರಧಾನ ದಿವಾಣಿ ನ್ಯಾಯಾಧೀಶ ನಾಗೇಶ ನಾಯ್ಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಕಾನೂನು ವಿದ್ಯಾರ್ಥಿಗಳು ಸಂವಿಧಾನದಲ್ಲಿ ಅಡಕವಾಗಿರುವ ಸಾಮಾಜಿಕ ಮತ್ತು ಆರ್ಥಿಕ ನ್ಯಾಯದ ಪರಿಕಲ್ಪನೆಯನ್ನು ಅರ್ಥೈಸಿಕೊಂಡು ಸಮಾಜದಲ್ಲಿನ ಕೆಳವರ್ಗದ ಜನರಲ್ಲಿ ಅರಿವು ಮೂಡಿಸಬೇಕು. ಉಚಿತ ಮತ್ತು ಗುಣಮಟ್ಟದ ಕಾನೂನು ಸೇವೆಗಳನ್ನು ಅವರಿಗೆ ನೀಡಿ ಸಂವಿಧಾನದ ಮೌಲ್ಯಗಳನ್ನು ಸಂರಕ್ಷಿಸಬೇಕೆಂದು ಹೇಳಿದರು.
ವಕೀಲರ ಸಂದ ಅಧ್ಯಕ್ಷ ಮಲ್ಲಿಕಾರ್ಜುನ ಬಾಣದ, ವಿದ್ಯಾರ್ಥಿಗಳು ಶ್ರೇಷ್ಠ ವಕೀಲರ ಮಾರ್ಗದರ್ಶನದಲ್ಲಿ ನಡೆದು ಯಶಸ್ಸು ಸಾಧಿಸಬೇಕು ಎಂದರು.
ಪ್ರಾಚಾರ್ಯ ಡಾ. ಜ್ಞಾನೇಶ್ವರ ಚೌರಿ ಅಧ್ಯಕ್ಷತೆ ವಹಿಸಿದ್ದರು.
ಐಶ್ವರ್ಯ ಸ್ವಾಗತಿಸಿದರು. ಡಾ. ಸಂಜೀವ ಹುಲ್ಲೂರ ಅತಿಥಿಗಳನ್ನು ಪರಿಚಯಿಸಿದರು. ಡಾ. ಶಾರದಾ ಪಾಟೀಲ ಪ್ರತಿಜ್ಞಾ ವಿಧಿ ಬೋಧಿಸಿದರು. ಗಾಯತ್ರಿ ಕಮ್ಮಾರ ಕಾರ್ಯಕ್ರಮ ನಿರೂಪಿಸಿದರು. ಚೇತನಾ ಪೊಲಿಶಿ ವಂದಿಸಿದರು.