ಅಂಗವಿಕಲರ ಕ್ರೀಡಾ, ಸಾಂಸ್ಕೃತಿಕ ಸ್ಪರ್ಧೆ

ಅಂಗವಿಕಲರ ಕ್ರೀಡಾ, ಸಾಂಸ್ಕೃತಿಕ ಸ್ಪರ್ಧೆ
Published on

ಸೋಮವಾರಪೇಟೆ: ಶಿಶು ಅಭಿವೃದ್ಧಿ ಯೋಜನಾ ಕಚೇರಿ, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ರೋಟರಿ ಸಂಸ್ಥೆ, ಇನ್ನರ್ ವೀಲ್ ಕ್ಲಬ್ ಆಫ್ ಸೋಮವಾರಪೇಟೆ ಗೋಲ್ಡ್ ಹಾಗೂ ನಾವು ಪ್ರತಿಷ್ಠಾನದ ಸಹಯೋಗದೊಂದಿಗೆ ವಿಶ್ವ ಅಂಗವಿಕಲರ ದಿನಾಚರಣೆ ಅಂಗವಾಗಿ ಪಟ್ಟಣದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ಗುರುವಾರ ಅಂಗವಿಕಲರ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳು ನಡೆದವು.

ಸ್ಪರ್ಧಾ ಕಾರ್ಯಕ್ರಮಕ್ಕೆ ರೋಟರಿ ಸಂಸ್ಥೆ ಅಧ್ಯಕ್ಷ ಜೆ.ಕೆ. ಪೊನ್ನಪ್ಪ ಚಾಲನೆ ನೀಡಿದರು. ನಂತರ ಮಾತನಾಡಿ, ವಿಕಲಚೇತನರಿಗೆ ಸರ್ಕಾರ ಹೆಚ್ಚಿನ ಸೌಲಭ್ಯಗಳನ್ನು ಕಲ್ಪಿಸಬೇಕು. ನಾಗರಿಕ ಸಮಾಜವೂ ವಿಕಲಚೇತನರನ್ನು ಗೌರವದಿಂದ ಕಾಣಬೇಕು. ಸಾಧ್ಯವಾದರೆ ಹಣಕಾಸಿನ ಸಹಾಯವನ್ನು ಮಾಡಬೇಕು ಎಂದು ಮನವಿ ಮಾಡಿದರು.

ಜಿಲ್ಲಾ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಅಧಿಕಾರಿ ವಿಮಲ ಮಾತನಾಡಿ, ವಿಕಲಚೇತನರಲ್ಲೂ ಪ್ರತಿಭೆಯಿದೆ. ಸುಪ್ತವಾಗಿರುವ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹ ನೀಡಲು ಇಂತಹ ಕ್ರೀಡಾಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಹೇಳಿದರು.

ಆಯುರ್ವೇದ ಆಸ್ಪತ್ರೆಯ ವೈದ್ಯರಾದ ಶ್ವೇತಾ, ದೈಹಿಕ ಶಿಕ್ಷಣ ಪರಿವೀಕ್ಷಕರಾದ ಸುಕುಮಾರಿ, ತಾಲೂಕು ಅಂಗವಿಕಲರ ಸಂಘದ ಅಧ್ಯಕ್ಷ ಸಂಗಮೇಶ್, ವಿವೇಕಾನಂದ ಯೂತ್ ಮೂವ್‌ಮೆಂಟ್ ತಾಲೂಕು ಅಧ್ಯಕ್ಷೆ ಸುನಿತಾ, ಇನ್ನರ್ ವೀಲ್ ಕ್ಲಬ್ ಅಧ್ಯಕ್ಷೆ ಸಂಗೀತಾ ದಿನೇಶ್, ನಾವು ಪ್ರತಿಷ್ಠಾನದ ಸ್ಥಾಪಕ ಅಧ್ಯಕ್ಷ ಗೌತಮ್ ಕಿರಗಂದೂರು, ಶನಿವಾರಸಂತೆ ಸನ್ನಿಧಿ ಶಾಲೆಯ ವ್ಯವಸ್ಥಾಪಕ ನಿರಂಜನ್ ಇದ್ದರು. ಆಯುರ್ವೇದ ಆಸ್ಪತ್ರೆಯ ವತಿಯಿಂದ ಆರೋಗ್ಯ ತಪಾಸಣೆ ನಡೆಸಿ ಔಷಧಿ ವಿತರಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net