

ಹುಬ್ಬಳ್ಳಿ: ಕರ್ನಾಟಕ ರಾಜ್ಯ ನಿವೃತ್ತ ಸರ್ಕಾರಿ ನೌಕರರ ಹಾಗೂ ಹಿರಿಯ ನಾಗರಿಕರ ಕ್ಷೇಮಾಭಿವೃದ್ಧಿ ಸಂಘ, ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ಸೆ.10ರಿಂದ 12ರವರೆಗೆ 60 ವರ್ಷ ದಾಟಿದ ಹಿರಿಯ ನಾಗರಿಕ (ಮಹಿಳಾ ಹಾಗೂ ಪುರುಷ)ರಿಗಾಗಿ ಕ್ರೀಡೆ ಮತ್ತು ಸಾಂಸ್ಕೃತಿಕ ಸ್ಪರ್ಧೆ ಆಯೋಜಿಸಿದೆ.
10ರಂದು ಬೆಳಗ್ಗೆ 10 ಗಂಟೆಗೆ ಹುಬ್ಬಳ್ಳಿಯ ನೆಹರು ಮೈದಾನದಲ್ಲಿ ವಿಧಾನ ಪರಿಷತ್ ಸದಸ್ಯ ಜಗದೀಶ ಶೆಟ್ಟರ್ ಉದ್ಘಾಟಿಸುವರು.
11ರಂದು ಬೆಳಗ್ಗೆ 10 ಗಂಟೆಗೆ ಒಳಾಂಗಣ ಕ್ರೀಡಾ ಸ್ಪರ್ಧೆಯನ್ನು ತಹಶೀಲ್ದಾರ ಕೆ. ಆರ್. ಪಾಟೀಲ ಹಾಗೂ 12 ರಂದು ಬೆಳಗ್ಗೆ 10 ಗಂಟೆಗೆ ಸಂಘದ ಕಚೇರಿಯಲ್ಲಿ ಸಾಂಸ್ಕೃತಿಕ ಸ್ಪರ್ಧೆಗಳನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ ಉದ್ಘಾಟಿಸುವರು.
ಮಹಿಳಾ ಹಾಗೂ ಪುರುಷರಿಗಾಗಿ ಪ್ರತ್ಯೇಕವಾಗಿ ಓಟ, ತೀವ್ರ ನಡಿಗೆ, ಕ್ರಿಕೆಟ್ ಬಾಲ್ ಥ್ರೋ, ಬಾಣದ ಎಸೆತ, ಕೇರಂ, ಬಲೂನ ಒಡೆಯುವ, ಹಾಡುಗಾರಿಕೆ, ಏಕಪಾತ್ರಾಭಿನಯ ಸ್ಪರ್ಧೆ ಏರ್ಪಡಿಸಲಾಗಿದೆ.