

ಕೆರೂರ: ಮಕ್ಕಳ ಸರ್ವತೋಮುಖ ಬೆಳವಣಿಗೆ ಹಾಗೂ ಉತ್ತಮ ಆರೋಗ್ಯಕ್ಕೆ ಕ್ರೀಡೆಗಳು ಪೂರಕವಾಗಿವೆ ಎಂದು ಶಾಸಕ ಭೀಮಸೇನ ಚಿಮ್ಮನಕಟ್ಟಿ ಹೇಳಿದರು.
ಪಟ್ಟಣದ ಎ. ಆರ್. ಹಿರೇಮಠ ಪ್ರೌಢಶಾಲೆಯಲ್ಲಿ ಹಮ್ಮಿಕೊಂಡಿದ್ದ ಕ್ಲಸ್ಟರ್ ಮಟ್ಟದ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿ, ಕ್ರೀಡೆಯಿಂದ ಮಕ್ಕಳ ದೈಹಿಕ ಆರೋಗ್ಯ ಸದೃಢವಾಗುತ್ತದೆ. ಅಲ್ಲದೆ, ಮಕ್ಕಳು ಕೇವಲ ಓದಿಗೆ ಮಾತ್ರ ಸೀಮಿತರಾಗದೆ ವಿವಿಧ ಕ್ಷೇತ್ರಗಳಲ್ಲಿ ಜ್ಞಾನ ಅರಿತುಕೊಳ್ಳುವುದೇ ನಿಜವಾದ ಶಿಕ್ಷಣದ ಗುರಿ ಎಂದರು.
ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಎಸ್. ಹಳಗೇರಿ ಮಾತನಾಡಿ, ಕ್ರೀಡೆಯಲ್ಲಿ ಸೋಲು-ಗೆಲುವು ಮುಖ್ಯವಲ್ಲ, ಭಾಗವಹಿಸುವುದು ಮುಖ್ಯ. ಕ್ರೀಡಾಸಕ್ತಿ ಇರುವ ಮಕ್ಕಳನ್ನು ಪಾಲಕರು ಪ್ರೋತ್ಸಾಹಿಸಬೇಕೆಂದು ಸಲಹೆ ನೀಡಿದರು.
ಕ್ಷೇತ್ರ ಸಮನ್ವಯಧಿಕಾರಿ ಎಂ.ಬಿ. ದೊಡ್ಡಪ್ಪನವರ, ಪ.ಪಂ. ಅಧ್ಯಕ್ಷೆ ನಿರ್ಮಲಾ ಮದಿ, ಜಿ.ಪಂ. ಮಾಜಿ ಸದಸ್ಯ ಎಂ.ಜಿ. ಕಿತ್ತಲಿ, ಎಂ. ಎಚ್. ಮೆಣಸಗಿ, ಸುರೇಶ ಪೂಜೇರಿ, ಶಿಕ್ಷಕರಾದ ರಾಮು ಅಂಕದ, ವಿಜಯಕುಮಾರ ಹಿರೇಮಠ, ದೈಹಿಕ ಶಿಕ್ಷಕ ಆರ್.ಬಿ. ಬಿಲ್ಲಾರ್, ಎನ್.ಎಲ್. ರಾಠೋಡ ಇತರರಿದ್ದರು.