ಮನೋದೈಹಿಕ ಆರೋಗ್ಯಕ್ಕೆ ಕ್ರೀಡಾಕೂಟ ಅಗತ್ಯ

h14-sports
Published on

ಹುಬ್ಬಳ್ಳಿ: ಇಲ್ಲಿಯ ಕೆಎಲ್‌ಇ ಸಂಸ್ಥೆಯ ಪರಪ್ಪ ಚನ್ನಪ್ಪ ಜಾಬಿನ್ ಪದವಿ ಪೂರ್ವ ವಿಜ್ಞಾನ ಮಹಾವಿದ್ಯಾಲಯದಲ್ಲಿ ಶನಿವಾರ ವಾರ್ಷಿಕ ಕ್ರೀಡಾಕೂಟ ಏರ್ಪಡಿಸಲಾಗಿತ್ತು.

ವಿದ್ಯಾನಗರ ಠಾಣೆ ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ಶ್ರೀಮಂತ ಹುಣಸೀಕಟ್ಟಿ ಕ್ರೀಡಾ ಜ್ಯೋತಿ ಬೆಳಗಿಸಿ ಮಾತನಾಡಿ, ಮನೋದೈಹಿಕ ಆರೋಗ್ಯಕ್ಕೆ ಕ್ರೀಡಾಕೂಟಗಳು ಅಗತ್ಯ. ವಿದ್ಯಾರ್ಥಿಗಳು ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಯಲ್ಲಿ ಭಾಗವಹಿಸಬೇಕು. ಮಾದಕ ವಸ್ತು, ಮೊಬೈಲ್ ಫೋನ್, ಟಿವಿಗಳಿಂದ ದೂರ ಇರಿ ಎಂದು ಸಲಹೆ ನೀಡಿದರು.

ಪಿ.ಸಿ. ಜಾಬಿನ ವಿಜ್ಞಾನ ಮಹಾವಿದ್ಯಾಲಯ ಪ್ರಾಚಾರ್ಯ ಡಾ.ಎಲ್.ಡಿ. ಹೊರಕೇರಿ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿಗಳ ಸರ್ವತೋಮುಖ ಬೆಳಣಿಗೆ ಆಗಬೇಕಾದರೆ ಕ್ರೀಡಾಕೂಟಗಳು ಬಹಳ ಮುಖ್ಯ. ಪಾಠದೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲಿಯೂ ವಿದ್ಯಾರ್ಥಿಗಳು ಭಾಗವಹಿಸಿ ಜಯ ಸಾಧಿಸಬೇಕೆಂದರು.

ದೈಹಿಕ ಶಿಕ್ಷಣ ನಿರ್ದೇಶಕ ಡಾ. ಪ್ರಭಾಕರನ್ ಟಿ., ಕ್ರೀಡಾ ವೇದಿಕೆ ಉಪಾಧ್ಯಕ್ಷೆ ಅಮ್ರಿತಾ ಅಣ್ಣಿಗೇರಿ, ಕಾಲೇಜ್ ವೇದಿಕೆ ಉಪಾಧ್ಯಕ್ಷ ವೇಣುಗೋಪಾಲ ಎಚ್.ಆರ್. ಉಪಸ್ಥಿತರಿದ್ದರು.

ಪದವಿ ಪೂರ್ವ ಪ್ರಾಚಾರ್ಯ ವಿ.ಆರ್. ವಾಘಮೋಡಿ ಸ್ವಾಗತಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ಉಮೇಶ ಡಿ. ಪ್ರತಿಜ್ಞಾವಿಧಿ ಬೋಧಿಸಿದರು. ಸೃಷ್ಟಿ, ಕೀರ್ತಿ ಪ್ರಾರ್ಥಿಸಿದರು. ಉಪನ್ಯಾಸಕಿ ಶಿಭೂಮಿ ಅಣ್ಣಿಗೇರಿ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net