ದೈಹಿಕ ಆರೋಗ್ಯಕ್ಕೆ ಕ್ರೀಡೆ ಸಹಕಾರಿ: ಪಿ.ಶ್ರೀಧರ್ ಅಭಿಪ್ರಾಯ

Mbd_Sports
Published on

ವಿಜಯವಾಣಿ ಸುದ್ದಿಜಾಲ ಮೂಡುಬಿದಿರೆ

ಎಲ್ಲರನ್ನು ಗೌರವಿಸುವ ಮನೋಭಾವ ಮೈಗೂಡಿಸಿಕೊಂಡಾಗ ಬದುಕು ಸೃಜನಾತ್ಮಕವಾಗುತ್ತದೆ. ಮನುಷ್ಯ ದೈಹಿಕವಾಗಿ ಆರೋಗ್ಯವಾಗಿದ್ದರೆ ಶೈಕ್ಷಣಿಕವಾಗಿ ಏನನ್ನಾದರೂ ಸಾಧಿಸಬಹುದು. ಅಂತಹ ದೈಹಿಕ ಆರೋಗ್ಯಕ್ಕೆ ಕ್ರೀಡೆ ಸಹಕಾರಿಯಾಗುತ್ತದೆ ಎಂದು ಮೂಡುಬಿದಿರೆ ವಲಯ ಸಹಾಯಕ ಅರಣ್ಯ ಸಂರಕ್ಷಣಾ ಅಧಿಕಾರಿ ಪಿ.ಶ್ರೀಧರ್ ಹೇಳಿದರು.

ಮೂಡುಬಿದಿರೆ ಕಲ್ಲಬೆಟ್ಟುವಿನಲ್ಲಿರುವ ಎಕ್ಸಲೆಂಟ್ ವಿದ್ಯಾಸಂಸ್ಥೆಯಲ್ಲಿ ನಡೆದ ವಾರ್ಷಿಕ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು.

ಎಕ್ಸಲೆಂಟ್ ವಿದ್ಯಾಸಂಸ್ಥೆ ಅಧ್ಯಕ್ಷ ಯುವರಾಜ್ ಜೈನ್ ಅಧ್ಯಕ್ಷತೆ ವಹಿಸಿದರು.

ಆರೋಗ್ಯಕ್ಕಾಗಿ ನಡಿಗೆ ಸ್ವಚ್ಛತೆಯ ಕಡೆಗೆ ಎಂಬ ಘೋಷವಾಕ್ಯದೊಂದಿಗೆ ಮೂಡುಬಿದಿರೆ ಮಹಾವೀರ ಕಾಲೇಜಿನ ಕೀರ್ತಿನಗರ ವೃತ್ತದಿಂದ ಮ್ಯಾರಥಾನ್ ನಡಿಗೆಯೊಂದಿಗೆ ಆರಂಭಗೊಂಡಿತು. ಡಾ.ಜಯಗೋಪಾಲ್ ತೋಳ್ಪಾಡಿ ಮ್ಯಾರಥಾನ್ ಉದ್ಘಾಟಿಸಿದರು.

ಮೂಡುಬಿದಿರೆ ಅರ್ಹತ್ ಸ್ಪೋರ್ಟ್ಸ್ ಅಕಾಡೆಮಿ ಸ್ಥಾಪಕ ಪೃಥ್ವಿರಾಜ್ ಶೆಟ್ಟಿ ಮುಖ್ಯ ಅತಿಥಿಯಾಗಿದ್ದರು. ಎಕ್ಸಲೆಂಟ್ ವಿದ್ಯಾಸಂಸ್ಥೆಗಳ ಕಾರ್ಯದರ್ಶಿ ರಶ್ಮಿತಾ ಜೈನ್ ಪ್ರಾಂಶುಪಾಲ ಪ್ರದೀಪ್ ಕುಮಾರ್ ಶೆಟ್ಟಿ, ಕೇಂದ್ರೀಯ ವಿದ್ಯಾಲಯದ ಪ್ರಾಂಶುಪಾಲ ಸುರೇಶ್, ಮುಖ್ಯ ಶಿಕ್ಷಕ ಶಿವಪ್ರಸಾದ್ ಭಟ್ ಉಪಸ್ಥಿತರಿದ್ದರು.

ವಿಕ್ರಂ ನಾಯ್ಕ ಸ್ವಾಗತಿಸಿದರು. ಡಾ.ವಾದಿರಾಜ್ ಕಲ್ಲೂರಾಯ, ಪ್ರಿಯಾಂಕ ಅತಿಥಿಗಳನ್ನು ಪರಿಚಯಿಸಿದರು. ಪ್ರಸಾದ್ ಕಾರ್ಯಕ್ರಮ ನಿರೂಪಿಸಿದರು. ವೈಶಾಲಿ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net